ಸಂತಿಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ 

  • 15 Jan 2024 , 12:42 AM
  • Belagavi
  • 167

ಬೆಳಗಾವಿ : ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದೇಮಣ್ಣ ನಾಯ್ಕ ಜಯ ಗಳಿಸಿದ್ದಾರೆ.

ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ತುರುಸಿನ ಸ್ಪರ್ಧೆಯಲ್ಲಿ ಒಟ್ಟು 15 ಮತಗಳ ಪೈಕಿ  ದೇಮಣ್ಣ ನಾಯ್ಕ 8 ಮತ ಗಳಿಸಿ ಜಯ ಸಾಧಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರಮ ಗುದುಮ್ಕೇರಿ ಅವರು 7 ಮತ ಗಳಿಸಿ ಸೋಲನುಭವಿಸಿದರು.

 ಅಧ್ಯಕ್ಷ ಸ್ಥಾನಕ್ಕೇರಿದ ಕಾಂಗ್ರೆಸ್ ಅಭ್ಯರ್ಥಿ ದೇಮಣ್ಣ ನಾಯ್ಕ ಹಾಗೂ  ಆಯ್ಕೆಯಾಗಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.

Read All News