ಬೆಳಗಾವಿ: ಗಾಂಧಿ ಗ್ರಾಮ ಯೋಜನೆ ಹಾಗೂ ನರೇಗಾ ಯೋಜನೆಯಲ್ಲಿ ಅತ್ಯುತ್ತಮ ಸಾಧನೆಗೈದ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಸವದತ್ತಿ ವಲಯ ಸಾಮಾಜಿಕ ಅರಣ್ಯ ವಿಭಾಗಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ದೊರಕಿದೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ 2022-23 ನೇಯ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ ಗೊಂಡ ಇಲಾಖೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲಾ ಮತ್ತು ತಾಲೂಕ ಮಟ್ಟದ ಇಲಾಖೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾ ಅತ್ತ್ಯುತ್ತಮ ಒಗ್ಗೂಡಿಸುವ ಕಾರ್ಯದಲ್ಲಿ ರಾಜ್ಯ ಮಟ್ಟದ ನರೇಗಾ ಪ್ರಶಸ್ತಿಯನ್ನು ಬೆಳಗಾವಿಯ ಸಾಮಾಜಿಕ ಅರಣ್ಯ ವಿಭಾಗಕ್ಕೆ ನೀಡಿ ಗೌರವಿಸಲಾಯಿತು ಹಾಗೂ ತಾಲೂಕ ಮಟ್ಟದ ಹಸಿರು ಪಂಚಾಯತ್ ಪುರಸ್ಕಾರವನ್ನು ಬೆಳಗಾವಿ ವಿಭಾಗದ ಸವದತ್ತಿ ಸಾಮಾಜಿಕ ಅರಣ್ಯ ವಲಯಕ್ಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರದಲ್ಲಿ ಕಂದಾಯ ಸಚಿವರು ಶ್ರೀ ಆರ್ ಅಶೋಕ್, ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು. ಜಿಲ್ಲೆಯ ವತಿಯಿಂದ ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮದಲ್ಲಿ ಬೆಳಗಾವಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ಹರ್ಷಲ್ ಬೋಯಾರ್ ಹಿಂದಿನ ಸಿಇಒ ಶ್ರೀ ದರ್ಶನ್ ಹೆಚ್.ವಿ ಹಾಗೂ ಬೆಳಗಾವಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಶಿವಾನಂದ ನಾಯಿಕವಾಡಿ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ಎ.ಸಿ.ಎಫ್ ಗಳಾದ ಶ್ರೀ M.K.ಪಾತ್ರೋಟ,
ಶ್ರೀ ಸಂದೀಪ್ ಅಬ್ಯಂಕರ್ ಹಾಜರಿದ್ದರು