ಕುಡಿವ ನೀರಿಗೆ ಜಿಪಂಗಳಿಗೆ ಪ್ರತ್ಯೇಕ ಅನುದಾನ : ಸಚಿವ ಪ್ರಿಯಾಂಕ್ ಖರ್ಗೆ

  • shivaraj bandigi
  • 15 Jan 2024 , 3:51 AM
  • Belagavi
  • 288

ಬೆಳಗಾವಿ : ಸುವರ್ಣವಿಧಾನಸೌಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂತರ್ಜಲಮಟ್ಟ ಕುಸಿತವಾಗಿದ್ದು, ಈ ಕುರಿತು ಅಧ್ಯಯನ ಮಾಡಿ ಸೂಕ್ತ ಶಿಪಾರಸ್ಸು ಮಾಡಲು ತಜ್ಞರೊಳಗೊಂಡ ವಾಟರ್ ಅಡಿಟ್ ಕಮಿಟಿಯನ್ನು ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ವಿಧಾನಸಭೆಯಲ್ಲಿ ಡಿಸೆಂಬರ್ 7ರಂದು ನಡೆದ ಬರ ವಿಷಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರಕಾರವು ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖಾಂತರ ಪ್ರತಿ ಜಿಲ್ಲೆಯಲ್ಲಿ ಕಂಟಿಜೆನ್ಸಿ ಪ್ಲಾನ್ ತಯಾರಿಸಲಾಗಿದ್ದು, ಪ್ರತಿ ತಿಂಗಳು ತಾವು ವಿಡಿಯೊ ಕಾನ್ಪರೆನ್ಸ್ ಮೂಲಕ ಸಭೆ ಜರುಗಿಸಿ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಬರ ನಿರ್ವಹಣೆಯಲ್ಲಿ ಲೋಪವಾಗದಂತೆ, ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಬರ ಹಿನ್ನೆಲೆಯ ಸಮಸ್ಯೆಗಳ ಬಗ್ಗೆ ಸರಕಾರವು ಮುನ್ನೆಚ್ಚರಿಕೆ ವಹಿಸಿದೆ. ಪ್ರತಿ ಜಿಲ್ಲಾ ಪಂಚಾಯತಿಯ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಲ್ಲಿ ಕುಡಿಯುವ ನೀರಿಗಾಗಿ 1 ಕೋಟಿ ರೂ.ಗಳ ಹಣವನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಸದನ ಸದಸ್ಯರ ಸಲಹೆ ಮೇರೆಗೆ ಅಗತ್ಯವಿರುವ ಕ್ರಮವಹಿಸುವುದಾಗಿ ಅವರು ತಿಳಿಸಿದರು.

Read All News