ಬೆಂಗಳೂರು :ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ ಅವರಿಗೆ ಯಾವುದೇ ಅನ್ಯಾಯ, ಅವಮಾನ ಆಗಿಲ್ಲ,ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಸೇರಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ .
ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಯಾವ ಕಾರಣಕ್ಕೆ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಂದು ನನಗೆ ಗೊತ್ತಿಲ್ಲ ಎಂದಿದ್ದಾರೆ.
ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಮತ್ತೆ ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು, ಆ ನಂತರ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.