ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಬಿಜೆಪಿ ಕರ್ನಾಟಕ ಕಸಿಯುತ್ತಿದೆ, ಪೊಲೀಸರೇ ರೌಡಿಗಳಿಗೆ ಸೆಲ್ಯೂಟ್ ಹೊಡೆಯುವ ಪರಿಸ್ಥಿತಿ ನಿರ್ಮಿಸುತ್ತಿದೆ.
ಮೊನ್ನೆಯಷ್ಟೇ ಸೈಲೆಂಟ್ ಸುನಿಲ್ ಎಂಬ ರೌಡಿಯನ್ನು ಹುಡುಕಿ ರೈಡ್ ಮಾಡಿದ್ದ ಪೊಲೀಸರೇ ಈಗ ಆತನ ಎದುರು ಸೈಲೆಂಟ್ ಆಗಿದ್ದಾರೆ.ಸಮಾಜಕ್ಕೆ ಯಾವ ಸಂದೇಶ ಕೊಡುತ್ತಿದೆ ಸರ್ಕಾರ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿತ್ತು .
ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ ಎಂದಿದ್ದಾರೆ . ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.