ಸಾಮಾಜಿಕವಾಗಿ ಮುಂದೆ ಬರಲು ಕೌಶಲ್ಯಾಭಿವೃದ್ದಿ ಅವಶ್ಯಕ! ಸಿಎಂ ಸಿದ್ದರಾಮಯ್ಯ

  • Shivaraj
  • 12 Dec 2025 , 1:08 PM
  • Belagavi
  • 39

ಬೆಳಗಾವಿ- ಸ್ವಾವಲಂಭಿ ಜೀವನಕ್ಕಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಅತೀ ಅವಶ್ಯಕವೆಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸೊದರು. 

ಅವರು ಕೌಶ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ, ಇಲ್ಲಿನ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ, "ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿ, ಮಾತನಾಡಿ, ಪರರ ಮೇಲಡ ಅವಲಂಭಿತವಾಗದೆ ಸ್ವಾವಲಂಭಿ ಜೀವನ ನಡೆಸಲು ಇಂತಹ ಮೇಳಗಳು ಸಹಕಾರಿಯಾಗಲಿವೆ. ಅವುಗಳ ಸದುಪಯೋಗ ಪಡೆದುಕೊಂಡು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದೆ ಬರಬೇಕೆಂದು ಸಲಹೆ ನೀಡಿದರು. 

ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Read All News