ರಾಹುಲ್ ಗಾಂಧಿ ಹಾಗೂ ರಾಬರ್ಟ್ ವಾದ್ರಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸ್ಮೃತಿ

  • shivaraj bandigi
  • 24 Apr 2024 , 3:20 PM
  • Uttarpradesh
  • 273

ಉತ್ತರ ಪ್ರದೇಶ: ಅಮೇಥಿಯಲ್ಲಿ ಮೇ 20ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಸ್ಮೃತಿ ಇರಾನಿ ರಾಹುಲ್ ಗಾಂಧಿ ಹಾಗೂ ರಾಬರ್ಟ್ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ, ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಐದು ವರ್ಷಗಳಲ್ಲಿ ಏನು ಮಾಡಬಲ್ಲೆ ಎಂದು ಜನರಿಗೆ ಮನವರಿಕೆ ಮಾಡಿಕೊಡಲು ಕೂಡ ಅವರಿಗೆ ಕಷ್ಟವಾಗುತ್ತಿರುವಂತಿದೆ ಎಂದು ಸ್ಮೃತಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Read All News