ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶ/ರಾಜ್ಯದ ವಿಡಿಯೋ ಮತ್ತು ಪೋಟೊಗಳನ್ನು ಬಿತ್ತರಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಜನರು ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ.
ನಗರ/ಗ್ರಾಮ/ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಇಲಾಖೆ ತಿಳಿಸಿದೆ .
ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.