ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಟ್ರಿಕ್ಟ್ ವಾರ್ನ್ ಮಾಡಿದ ಸಿಎಂ

  • Krishna Shinde
  • 14 Jan 2024 , 11:19 PM
  • Bengaluru
  • 411

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ನಿಮ್ಮ ಬಳಿ ಅನುದಾನ ಲಭ್ಯವಿದೆ ಅಗತ್ಯವಿದ್ದರೆ ಕೇಳಬೇಕು,ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಳೆ ಬಂದು ಮರಗಳು ಬಿದ್ದುಹೋದರೆ ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.
ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು ಎಂದು ಸಿಎಂ ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
 

Read All News