ಬೆಂಗಳೂರು :ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಅಕ್ಕಿ ನೀಡದೆ ಕನ್ನಡದ ಜನತೆಗೆ ಮೋಸಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಬೆನ್ನಲೆ ಉತ್ತರಿಸಿರುವ ಮಾಜಿ ಸಿಎಂ ಬೊಮ್ಮಾಯಿ ಹೊಸ ಸರ್ಕಾರ ರಚನೆಯಾದ ಮೊದಲ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯನವರು 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿ, ಅಧಿಕಾರಿಗಳೊಂದಿಗೆ ಅನೇಕ ಸರಣಿ ಸಭೆ ನಡೆಸಿದರು.
ಅಂದೇ ಅಧಿಕಾರಿಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ತಿಳಿಹೇಳಬಹುದಿತ್ತಲ್ವಾ...? ಎಂದು ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ ,ಕೊನೆ ಪಕ್ಷ ಟೆಂಡರ್ ಸಹ ಕರೆಯಲಿಲ್ಲ, ಕೇಂದ್ರ ಸರ್ಕಾರದೊಂದಿಗೆ ಸಂಪರ್ಕ ಸಹ ನಡೆಸದೇ, ಕೇವಲ FCI ನೊಂದಿಗೆ ಸಂವಹನ ನಡೆಸಿರುವುದನ್ನು ಗಮನಿಸಿದರೇ, ಈ ಸರ್ಕಾರಕ್ಕೆ ನುಡಿದಂತೆ ನಡೆಯಲು ಮತ್ತು ಜನರಿಗೆ ಅಕ್ಕಿ ಕೊಡಲು ಇಷ್ಟವಿಲ್ಲ ಎಂಬುದು ಸಾಬೀತಾಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಅಕ್ಕಿ ಕೊಡುವ ದಿನ ಹತ್ತಿರ ಬಂದ ಕಾರಣ, ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ, ತಮ್ಮ ತಪ್ಪನ್ನು ಸಾರ್ವಜನಿಕರೆದುರು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದು ಬೊಮ್ಮಾಯಿ ಸಿದ್ದರಾಮಯ್ಯ ವಿರುದ್ದ ಗುಡುಗಿದ್ದಾರೆ.