ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಟೀಕಿಸಿದ್ದಾರೆ.
"ಈ ಬಜೆಟ್‌ನಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಮಿಸಿರುವ ವಿನಾಶಕಾರಿ ಭಾರತದ ವಾಸ್ತವವನ್ನು ಬಚ್ಚಿಟ್ಟು ವಿಕಸಿತ ಭಾರತ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಲಾಗಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
"ಬಡವರು, ಮಹಿಳೆಯರು, ಯುವಕರು ಮತ್ತು ರೈತರನ್ನೊಳಗೊಂಡ ನಾಲ್ಕು 'ಜಾತಿ'ಗಳ ಅಭಿವೃದ್ಧಿಯ ಮೇಲೆ ಪ್ರಧಾನಿ ನರೇಂದ್ರ ಮೋದಿವರು ನಂಬಿಕೆ ಇಟ್ಟಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನೇ 'ವಿಕಸಿತ ಭಾರತ'ದ ಕನಸು ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ, ನರೇಂದ್ರ ಮೋದಿಯರ ಹತ್ತು ವರ್ಷಗಳ ಆಡಳಿತದಲ್ಲಿ ಕಷ್ಟ, ನಷ್ಟ, ದಮನ, ದೌರ್ಜನ್ಯಕ್ಕೀಡಾಗಿರುವುದು ಇದೇ ಬಡವರು, ಮಹಿಳೆಯರು, ಯುವಕರು ಮತ್ತು ರೈತರು" ಎಂದು ಸಿದ್ದರಾಮಯ್ಯ ವಿಮರ್ಶಿಸಿದ್ದಾರೆ.
"ಈ ಸಮುದಾಯಗಳ ಪಾಲಿಗೆ ಮೋದಿಯವರ ಹತ್ತು ವರ್ಷಗಳ ಆಡಳಿತ 'ವಿಕಸಿತ ಭಾರತ' ಅಲ್ಲ, ಅದು 'ವಿನಾಶಕಾರಿ ಭಾರತ'" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.