ಮೇಷ ರಾಶಿ: ವೃತ್ತಿಪರ ವ್ಯವಹಾರಗಳು ಸೀಮಿತವಾಗಿ ಸಾಗುತ್ತವೆ. ಕೆಲಸದಲ್ಲಿ ಅನಿರೀಕ್ಷಿತ ಬದಲಾವಣೆಗಳು ನಡೆಯುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುವುದು. ಸಹೋದರರೊಂದಿಗೆ ವಾದ-ವಿವಾದಗಳು ನಡೆಯುತ್ತವೆ. ಹಠಾತ್ ಪ್ರಯಾಣ ಸೂಚನೆಗಳು. ವಾಹನ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಬಣ್ಣ: ಹಳದಿ
ವೃಷಭ ರಾಶಿ: ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ , ಹೊಸ ವಾಹನ ಖರೀದಿ ನಡೆಯಲಿದೆ. ಸ್ನೇಹಿತರೊಂದಿಗೆ ಸಕ್ಯತೆಯಿಂದ ವರ್ತಿಸುತ್ತೀರಿ. ವ್ಯಾಪಾರದಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ದೈವ ದರ್ಶನಗಳನ್ನು ಮಾಡುತ್ತೀರಿ. ಉದ್ಯೋಗದಲ್ಲಿ ಪ್ರಗತಿ ಇರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ನೀಲಿ ಬಣ್ಣ
ಮಿಥುನ ರಾಶಿ: ಆರ್ಥಿಕವಾಗಿ ಹೆಚ್ಚಿನ ಪ್ರಗತಿ ಕಾಣಲಿದೆ. ಮಿತ್ರರಿಂದ ಆಶ್ಚರ್ಯಕರ ಸಂಗತಿಗಳು ತಿಳಿಯುತ್ತವೆ. ದೂರದ ಸ್ಥಳಗಳಿಂದ ಶುಭ ವಾರ್ತೆಗಳು ಬರುತ್ತವೆ. ಭೋಜನ ಮನರಂಜನೆಯಲ್ಲಿ ಭಾಗವಹಿಸುವಿರಿ. ವ್ಯಾಪಾರ ಉದ್ಯೋಗಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಬಣ್ಣ: ನೀಲಿ
ಕರ್ಕ ರಾಶಿ: ದೂರದ ಬಂಧುಗಳೊಂದಿಗೆ ಕಲಹ ಉಂಟಾಗುವುದು. ಮಕ್ಕಳ ಆರೋಗ್ಯದ ವಿಚಾರದಲ್ಲಿ ಜಾಗರೂಕತೆಯಿಂದ ವರ್ತಿಸಬೇಕು. ಮುಖ್ಯ ವ್ಯವಹಾರಗಳಲ್ಲಿ ಖರ್ಚು ಹೆಚ್ಚಾಗುವುದು.
ವ್ಯಾಪಾರ ಉದ್ಯೋಗಗಳಲ್ಲಿ ಮತ್ತಷ್ಟು ಒತ್ತಡ ಹೆಚ್ಚಾಗುವುದು. ಅನಿರೀಕ್ಷಿತ ಖರ್ಚು ಹೆಚ್ಚಾಗಲಿದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಬಣ್ಣ: ಹಳದಿ
ಸಿಂಹ ರಾಶಿ: ವ್ಯರ್ಥ ಪ್ರಯಾಣವನ್ನು ಮಾಡಬೇಕಾಗಬಹುದು. ಮನೆಯ ಹೊರಗೆ ಕಿರಿಕಿರಿಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಆರೋಗ್ಯ ಸಮಸ್ಯೆಗಳಿಂದ ಕಿರಿ ಕಿರಿ ಉಂಟಾಗುತ್ತದೆ . ವೃತ್ತಿ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚುತ್ತದೆ.
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ಬೂದು
ಕನ್ಯಾ ರಾಶಿ: ಆಪ್ತರೊಂದಿಗೆ ಮನೆಯಲ್ಲಿ ನೆಮ್ಮದಿಯಿಂದ ಕಾಲ ಕಳೆಯುವಿರಿ. ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ. ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ದೊರೆಯುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ತುಲಾ ರಾಶಿ: ಸ್ಥಿರಾಸ್ತಿಗೆ ಸಂಬಂಧಿಸಿದ ಹೊಸ ಒಪ್ಪಂದಗಳು ಮುಂದೂಡಲ್ಪಡುತ್ತವೆ. ವ್ಯಾಪಾರ ವ್ಯವಹಾರಗಳು ನಿರಾಶಾದಾಯಕವಾಗಿರುತ್ತದೆ. ಕೆಲಸಗಳಲ್ಲಿ ಕಠಿಣ ಪರಿಶ್ರಮ ಹೊರತುಪಡಿಸಿ ಯಾವುದೇ ಫಲಿತಾಂಶ ಕಂಡುಬರುವುದಿಲ್ಲ. ಉದ್ಯೋಗದಲ್ಲಿ ಅನ್ಯರಿಂದ ಅನಿರೀಕ್ಷಿತ ಸಮಸ್ಯೆಗಳು ಎದುರಾಗಲಿವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಪ್ರಾಯನಗಳು ಅಷ್ಟರ ಮಟ್ಟಿಗೆ ಕೂಡಿ ಬರುವುದಿಲ್ಲ.
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ನೀಲಿ
ವೃಶ್ಚಿಕ ರಾಶಿ: ಕುಟುಂಬದ ಸದಸ್ಯರಿಂದ ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ. ಹೊಸ ಜನರ ಭೇಟಿಯಿಂದ ಒಂದಿಷ್ಟು ಉತ್ಸಾಹ ಮೂಡುವುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಭೋಜನ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಬಣ್ಣ: ಹಸಿರು
ಧನು ರಾಶಿ: ಬಂಧು ಮಿತ್ರರಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುವುದು. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬವಾಗಲಿದೆ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ ಮತ್ತು ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರದ ಕೆಲಸಗಳು ಸಮಸ್ಯಾತ್ಮಕವಾಗಿರುತ್ತವೆ. ಸಮಯಕ್ಕೆ ಹಣವನ್ನು ಪಡೆಯುವಲ್ಲಿ ನಿಮಗೆ ತೊಂದರೆಯಾಗುವುದು.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಹಳದಿ
ಮಕರ ರಾಶಿ: ಸಮಾಜದಲ್ಲಿ ಹಿರಿಯರ ಜೊತೆಗಿನ ಚರ್ಚೆ ಲಾಭದಾಯಕವಾಗಲಿದೆ. ವಿವಾದಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಹೊಸ ಪ್ರಯತ್ನಗಳು ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಏರಿಳಿತಗಳು ಹೊರಬರುತ್ತವೆ. ಸಾಲಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಹೊರಬರುವಿರಿ.
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ: ನೇರಳೆ
ಕುಂಭ ರಾಶಿ: ಹಣದ ವಿಷಯದಲ್ಲಿ ತೊಂದರೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಬಂಧು ಮಿತ್ರರಿಂದ ಶುಭ ಸಮಾಚಾರ ದೊರೆಯಲಿದೆ. ಬಾಲ್ಯದ ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವಿರಿ. ಉದ್ಯಮ ವಿಸ್ತರಣೆಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ನಿರುದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರುತ್ತದೆ. ವಿದ್ಯಾರ್ಥಿಗಳಿಗೆ ಕಷ್ಟ ಫಲಿಸುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಮೀನ ರಾಶಿ: ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುವುದು. ವೃತ್ತಿ ವ್ಯಾಪಾರದಲ್ಲಿ ದಿಢೀರ್ ಬದಲಾವಣೆಗಳಾಗುವುದು. ಸಾಲದ ಒತ್ತಡಗಳು ಹೆಚ್ಚಾಗುವುದು. ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗುವುದು. ಕುಟುಂಬದವರೊಂದಿಗೆ ಸಣ್ಣ ಪುಟ್ಟ ಕಲಹಗಳು, ತಲೆನೋವು ಹೆಚ್ಚಾಗುವುದು.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ: ಕೆಂಪು