ಮೇಷ ರಾಶಿ
ಸಹೋದರರೊಂದಿಗಿನ ಆಸ್ತಿ ವಿವಾದಗಳು ಬಗೆಹರಿಯುತ್ತವೆ. ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ನಿರುದ್ಯೋಗಿಗಳು ಕಾರ್ಯ ಸಿದ್ಧಿ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸುತ್ತೀರಿ. ಆರ್ಥಿಕ ಅಭಿವೃದ್ಧಿ ಹೊಂದುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ವೃಷಭ ರಾಶಿ
ಹಳೆ ಸಾಲಗಳು ವಸೂಲಿಯಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ವಿಳಂಬವಾದರೂ ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ಸ್ನೇಹಿತರಿಂದ ಮಹತ್ವದ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಸಮಾಜದಲ್ಲಿ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ವ್ಯಾಪಾರ ಉದ್ಯೋಗಗಳು ಹೆಚ್ಚು ಉತ್ಸಾಹದಿಂದ ಸಾಗುತ್ತವೆ. ದೂರದ ಪ್ರಯಾಣಗಳು ಲಾಭದಾಯಕವಾಗಿರುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಗುಲಾಬಿ
ಮಿಥುನ ರಾಶಿ
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದಾಗಿ, ಸಾಕಷ್ಟು ವಿಶ್ರಾಂತಿ ದೊರೆಯುವುದಿಲ್ಲ. ವ್ಯಾಪಾರಗಳು ಮತ್ತಷ್ಟು ನಿಧಾನವಾಗುತ್ತವೆ. ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿಗಳಿರುತ್ತವೆ. ನಿರುದ್ಯೋಗಿಗಳಿಗೆ ನಿರಾಸೆ ಉಂಟಾಗುತ್ತದೆ. ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸುವುದು ಉತ್ತಮ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಳದಿ
ಕಟಕ ರಾಶಿ
ಕೈಗೊಂಡ ಕೆಲಸದಲ್ಲಿ ಶ್ರಮಶೀಲತೆ ಹೆಚ್ಚಾಗುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನದ ಕೊರತೆಯಿಂದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರಮುಖ ವ್ಯವಹಾರಗಳಲ್ಲಿ ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಕಿತ್ತಳೆ
ಸಿಂಹ ರಾಶಿ
ಅಗತ್ಯಕ್ಕೆ ಕೈಗೆ ಹಣ ದೊರೆಯುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಒದಗಿ ಬರುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಮನೆಯಲ್ಲಿ ಸ್ನೇಹಿತರೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಾರೆ. ಸ್ನೇಹಿತರೊಂದಿಗೆ ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿನ ನಷ್ಟವನ್ನು ಸರಿದೂಗಿಸುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಕೆಂಪು
ಕನ್ಯಾ ರಾಶಿ
ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗುತ್ತದೆ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೀರಿ. ಹೊಸ ಕಾರ್ಯಕ್ರಮಗಳು ಆರಂಭಿಸುತ್ತೀರಿ. ಹೊಸ ವಾಹನ ಖರೀದಿಸುತ್ತೀರಿ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ವೃತ್ತಿ ಮತ್ತು ಉದ್ಯೋಗಗಳು ಉತ್ಸಾಹದಾಯಕವಾಗಿರುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ನೇರಳೆ
ತುಲಾ ರಾಶಿ
ಸಾಲಗಾರರ ಒತ್ತಡದಿಂದ ಹೊರಬರಲು ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಸಂಗಾತಿಯೊಂದಿಗೆ ಅನಿರೀಕ್ಷಿತ ವಾದ-ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾದ ಸೂಚನೆಗಳಿವೆ. ವ್ಯಾಪಾರ-ವ್ಯವಹಾರಗಳಲ್ಲಿ ಸ್ವಲ್ಪ ಆರ್ಥಿಕ ನಷ್ಟಗಳು ಉಂಟಾಗುತ್ತವೆ. ವೃತ್ತಿ-ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಕಿತ್ತಳೆ
ವೃಶ್ಚಿಕ ರಾಶಿ
ಕುಟುಂಬ ಸದಸ್ಯರ ವರ್ತನೆಯು ಕಿರಿಕಿರಿಕಿರಿಯನ್ನುಂಟು ಮಾಡುತ್ತದೆ. ಉದ್ಯೋಗದಲ್ಲಿ ನಿಯೋಜಿಸಲಾದ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ವಿಫಲವಾಗುತ್ತೀರಿ. ವ್ಯಾಪಾರಗಳು ಸ್ವಲ್ಪ ನಿಧಾನವಾಗಿ ಸಾಗುತ್ತವೆ, ನಿರುದ್ಯೋಗ ಪ್ರಯತ್ನಗಳು ಫಲಿವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಆಸ್ತಿ ವಿಚಾರದಲ್ಲಿ ಸಹೋದರರೊಂದಿಗೆ ವಿವಾದಗಳು ಉಂಟಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಧನಸ್ಸು ರಾಶಿ
ಸಮಾಜದ ಪ್ರಮುಖ ವ್ಯಕ್ತಿಗಳಿಂದ ವಿಶೇಷ ಬೆಂಬಲವನ್ನು ಪಡೆಯುತ್ತೀರಿ. ವ್ಯವಹಾರದಲ್ಲಿನ ವಿವಾದಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯಮಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಸ್ನೇಹಿತರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ತಾಳ್ಮೆಯಿಂದ ಕೆಲಸ ಮಾಡಿ ಸಮಸ್ಯೆಗಳಿಂದ ಹೊರಬರುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೇರಳೆ
ಮಕರ ರಾಶಿ
ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಹಠಾತ್ ಧನ ವ್ಯಯದ ಸೂಚನೆಗಳಿವೆ. ವ್ಯಾಪಾರ ನಿಧಾನವಾಗಲಿದೆ. ಕೆಲಸದಲ್ಲಿ ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಹಸಿರು
ಕುಂಭ ರಾಶಿ
ಮನೆಯ ಹೊರಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವ್ಯಾಪಾರ ಮತ್ತು ವ್ಯವಹಾರದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಹಳೆಯ ಘಟನೆಗಳನ್ನು ನೆನಪಿಸಿಕೊಳ್ಳುತ್ತೀರಿ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುತ್ತೀರಿ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಮೀನ ರಾಶಿ
ವ್ಯವಹಾರದಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು, ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಆಪ್ತ ಸ್ನೇಹಿತರಿಂದ ಪಡೆದ ಮಾಹಿತಿಯು ಸಂತೋಷವನ್ನು ತರುತ್ತದೆ. ಕೈಗೊಂಡ ಕೆಲಸಗಳನ್ನು ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದಿಲ್ಲ. ಮಕ್ಕಳ ಶೈಕ್ಷಣಿಕ ಫಲಿತಾಂಶಗಳು ನಿರೀಕ್ಷೆಯಂತೆ ಇರುತ್ತವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ