ಮೇಷ ರಾಶಿ
ಕೈಗೆತ್ತಿಕೊಂಡ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ, ದೈವಿಕ ಚಿಂತನೆ ಹೆಚ್ಚಾಗುತ್ತದೆ. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂಭ್ರಮದಿಂದ ಕಾಲ ಕಳೆಯುತ್ತೀರಿ. ಮನೆಯ ಹೊರಗಿನ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ. ವೃತ್ತಿ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಅನುಷ್ಠಾನಗೊಳಿಸುತ್ತೀರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆ ಫಲಿಸುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು
ವೃಷಭ ರಾಶಿ
ವ್ಯರ್ಥ ಪ್ರಯಾಣ ಮಾಡಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಯೊಂದಿಗೆ ಮುಂದುವರಿಯುವುದು ಉತ್ತಮ. ಕೈಗೊಂಡ ಕೆಲಸವನ್ನು ಮುಂದೂಡುವುದು ಉತ್ತಮ, ಕೌಟುಂಬಿಕ ವಾತಾವರಣವು ಅಸ್ತವ್ಯಸ್ತವಾಗಿರುತ್ತದೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಮಿಥುನ ರಾಶಿ
ಬಾಲ್ಯದ ಸ್ನೇಹಿತರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ಆಪ್ತ ಸ್ನೇಹಿತರಿಂದ ಅನಿರೀಕ್ಷಿತ ಆರ್ಥಿಕ ಸಹಾಯ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ, ವ್ಯಾಪಾರ ವಿಸ್ತರಣೆ ಪ್ರಯತ್ನಗಳು ಕೂಡಿಬರಲಿವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು
ಕಟಕ ರಾಶಿ
ಆರ್ಥಿಕವಾಗಿ ಸ್ವಲ್ಪ ಪ್ರಗತಿ ಕಂಡುಬರುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ಕೈಗೊಂಡ ವ್ಯವಹಾರಗಳು ಅಪ್ರಯತ್ನವಾಗಿ ಪೂರ್ಣಗೊಳ್ಳುತ್ತವೆ. ಮನೆಯ ಹೊರಗೆ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಉಂಟಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಕೆಂಪು
ಸಿಂಹ ರಾಶಿ
ಆದಾಯದ ವಿಚಾರದಲ್ಲಿ ನಿರಾಸೆ ಉಂಟಾಗುತ್ತದೆ, ಉದ್ಯೋಗದಲ್ಲಿ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ, ವೃತ್ತಿ ವ್ಯವಹಾರದಲ್ಲಿ ಹೊಸ ಸಮಸ್ಯೆಗಳು ಎದುರಾಗುತ್ತವೆ. ಕೈಗೆತ್ತಿಕೊಂಡ ಕಾರ್ಯಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ದೂರ ಪ್ರಯಾಣದಲ್ಲಿ ಜಾಗರೂಕರಾಗಿರಿ. ದೈವಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ಹೊಸ ಸಾಲ ಪ್ರಯತ್ನಗಳು ಸ್ವಲ್ಪ ಮಟ್ಟಿಗೆ ಕೂಡಿ ಬರಲಿವೆ. ವೃತ್ತಿಪರ ಉದ್ಯೋಗಗಳಲ್ಲಿ ಹಠಾತ್ ಸ್ಥಾನಚಲನೆಗಳಾಗುತ್ತವೆ. ಹಣಕಾಸಿನ ತೊಂದರೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಬಂಧುಮಿತ್ರರೊಡನೆ ಭಿನ್ನಾಭಿಪ್ರಾಯಗಳಿರುತ್ತವೆ. ಹೊಸ ವ್ಯಾಪಾರಗಳನ್ನು ಪ್ರಾರಂಭಿಸುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಹಸಿರು
ತುಲಾ ರಾಶಿ
ಕುಟುಂಬದವರಿಂದ ಆಶ್ಚರ್ಯಕರ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ, ಆಕಸ್ಮಿಕ ಧನ ಲಾಭ ಉಂಟಾಗುತ್ತದೆ. ಹಳೆಯ ಸ್ನೇಹಿತರ ಭೇಟಿ ಸಂತಸ ತರುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯಗಳು ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿನ ತೊಡಕುಗಳು ನಿವಾರಣೆಯಾಗುತ್ತವೆ.
ಅದೃಷ್ಟದ ದಿಕ್ಕು:ವಾಯುವ್ಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ
ವೃಶ್ಚಿಕ ರಾಶಿ
ಆತ್ಮೀಯರೊಂದಿಗೆ ಸೌಹಾರ್ದಯುತವಾಗಿ ವರ್ತಿಸುತ್ತೀರಿ. ಹೊಸ ವಸ್ತ್ರ ಮತ್ತು ಆಭರಣ ಖರೀದಿಸುತ್ತೀರಿ. ಬಂಧು ಮಿತ್ರರಿಂದ ಶುಭಕಾರ್ಯಕ್ಕೆ ಆಹ್ವಾನಗಳು ಬರಲಿವೆ. ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಸ್ಥಿರಾಸ್ತಿ ಮಾರಾಟದಲ್ಲಿ ಹೊಸ ಲಾಭ ದೊರೆಯುತ್ತದೆ. ವ್ಯಾಪಾರ ಉದ್ಯೋಗಗಳು ಮತ್ತಷ್ಟು ಉತ್ಸಾಹದಿಂದ ಸಾಗುತ್ತವೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು
ಧನಸ್ಸು ರಾಶಿ
ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕುಟುಂಬ ಸದಸ್ಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ದೂರ ಪ್ರಯಾಣದಲ್ಲಿ ಜಾಗ್ರತೆ ವಹಿಸಬೇಕು. ಪ್ರಮುಖ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿ ಮತ್ತು ವ್ಯಾಪಾರ ನಿಧಾನವಾಗಿ ಸಾಗುತ್ತವೆ. ಉದ್ಯೋಗಗಳಲ್ಲಿ ಏರಿಳಿತಗಳು ಅಧಿಕವಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ನೀಲಿ
ಮಕರ ರಾಶಿ
ಆತ್ಮೀಯರಿಂದ ಪಡೆದ ಮಾಹಿತಿಯು ಭಾವನಾತ್ಮಕವಾಗಿ ತೊಂದರೆಗಳನ್ನು ಉಂಟುಮಾಡುತ್ತದೆ. ದೂರದ ಪ್ರಯಾಣಗಳಿಂದ ಶ್ರಮ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ವಿಳಂಬ ವಾಗುತ್ತದೆ. ಹಳೆ ಸಾಲಗಳನ್ನು ತೀರಿಸಲು ಹೊಸ ಸಾಲದ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ವೃತ್ತಿ ಪರ ವ್ಯಾಪಾರಗಳು ನಿರಾಸೆ ಉಂಟುಮಾಡುತ್ತವೆ. ಉದ್ಯೋಗ ವಿಚಾರದಲ್ಲಿ ಗೊಂದಲ ಉಂಟಾಗುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು
ಕುಂಭ ರಾಶಿ
ಆತ್ಮೀಯರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತೀರಿ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಭೂಮಿ ಸಂಬಂಧಿತ ಮಾರಾಟದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿಯು ನಿರೀಕ್ಷೆಯಂತೆ ಇರುತ್ತದೆ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ
ಮೀನ ರಾಶಿ
ನೆರೆ ಹೊರೆಯವರೊಂದಿಗೆ ಸ್ಥಿರಾಸ್ತಿ ವಿವಾದಗಳು ಉಂಟಾಗುತ್ತವೆ, ಆರೋಗ್ಯದ ಬಗ್ಗೆ ಜಾಗರೂಕರಾಗಿರ ಬೇಕು. ವೃತ್ತಿ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಪರಿಸ್ಥಿತಿಗಳು ವಿರುದ್ಧವಾಗಿರುತ್ತವೆ ಮತ್ತು ಕೈಗೊಂಡ ಕೆಲಸಗಳು ನಿಧಾನವಾಗಿರುತ್ತವೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಆತುರದ ನಿರ್ಧಾರಗಳು ತೆಗೆದುಕೊಳ್ಳುವುದ ರಿಂದ ನಷ್ಟಕ್ಕೆ ಕಾರಣವಾಗುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಹಳದಿ