ಮೇಷ ರಾಶಿ
ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಪ್ರಮುಖ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ದೂರದ ಪ್ರಯಾಣವನ್ನು ಆದಷ್ಟು ಮುಂದೂಡುವುದು ಉತ್ತಮ. ನಿಮ್ಮ ಆಲೋಚನೆಗಳು ಕುಟುಂಬ ಸದಸ್ಯರಿಗೆ ಮೆಚ್ಚಿಸುವಂತೆ ಇರುವುದಿಲ್ಲ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ವೃಷಭ ರಾಶಿ
ಮಕ್ಕಳ ಉದ್ಯೋಗ ಪ್ರಯತ್ನಗಳು ನಿರಾಶಾದಾಯಕ ವಾಗಿರುತ್ತದೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ವ್ಯಾಪಾರ ಉದ್ಯೋಗಗಳು ಮಂದಗತಿಯಲ್ಲಿಸಾಗುತ್ತವೆ. ಹಣಕಾಸಿನ ತೊಂದರೆಗಳಿಂದ ಹೊಸ ಸಾಲದ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ .ಪ್ರಯಾಣದ ಸಮಯದಲ್ಲಿ ವಾಹನ ಸಮಸ್ಯೆಗಳು ಉಂಟಾಗುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಬೂದು
ಮಿಥುನ ರಾಶಿ
ವ್ಯಾಪಾರ ಉದ್ಯೋಗಗಳಲ್ಲಿ ಅನುಕೂಲಕರ ಪರಿಸ್ಥಿತಿಗಳಿರುತ್ತವೆ. ಸಂಗಾತಿಯೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ನಿರುದ್ಯೋಗ ಪ್ರಯತ್ನಗಳು ಧನಾತ್ಮಕವಾಗಿರುತ್ತವೆ. ಭೂಮಿ ಸಂಬಂಧಿತ ಮಾರಾಟದಲ್ಲಿ ಲಾಭ,ದೊರೆಯುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳಿಂದ ವಿಶೇಷ ಬೆಂಬಲ ಸಿಗುತ್ತದೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕಟಕ ರಾಶಿ
ಹಣಕಾಸಿನ ವಿಚಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಪ್ರಮುಖ ಕಾರ್ಯಗಳಲ್ಲಿ, ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡು ಬರುತ್ತದೆ. ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಕೈಗೊಂಡಕಾರ್ಯಗಳನ್ನು ಸುಗಮವಾಗಿ ಪೂರ್ಣಗೊಳಿಸುತ್ತೀರಿ. ಸ್ನೇಹಿತರೊಂದಿಗೆ ಭೋಜನಾ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣಹಳದಿ
ಸಿಂಹ ರಾಶಿ
ಕುಟುಂಬ ಸದಸ್ಯರಿಂದ ಅನಿರೀಕ್ಷಿತ ಮಾತುಗಳನ್ನು ಕೇಳ ಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಆಧ್ಯಾತ್ಮಿಕ ವಿಷಯಗಳತ್ತ ಗಮನಹರಿಸುತ್ತೀರಿ. ದೀರ್ಘಾವಧಿ ಸಾಲದ ಒತ್ತಡಗಳು ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುವುದಿಲ್ಲ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗುತ್ತವೆ. ಹಣಕಾಸಿನ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ವ್ಯರ್ಥಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಹಸಿರು
ತುಲಾ ರಾಶಿ
ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಯೋಗವಿದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ಉದ್ಯೋಗಿಗಳು ಮತ್ತು ಅಧಿಕಾರಿಗಳ ನಡುವಿನ ವಿವಾದಗಳು ಬಗೆಹರಿಯುತ್ತವೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕಿತ್ತಳೆ
ವೃಶ್ಚಿಕ ರಾಶಿ
ಮನೆಯಲ್ಲಿನ ಕೆಲವು ಘಟನೆಗಳು ನಿಮಗೆ ಆಶ್ಚರ್ಯ ವನ್ನುಂಟು ಮಾಡುತ್ತವೆ. ಬಾಲ್ಯದ ಸ್ನೇಹಿತ ರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗಿಗಳು ಇತರರಿಂದ ಟೀಕೆಗೆ ಒಳಗಾಗುತ್ತಾರೆ ಮತ್ತು ಕೌಟುಂಬಿಕ ವಿಷಯಗಳಲ್ಲಿ ಜಾಗರೂಕರಾಗಿರ ಬೇಕು. ದೈವಿಕ ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಧನಸ್ಸು ರಾಶಿ
ಬೆಲೆಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಧೀರ್ಘ ಕಾಲದಿಂದ ಪೂರ್ಣಗೊಳ್ಳದ ಕೆಲಸಗಳು ಸಣ್ಣ ಪ್ರಯತ್ನದಿಂದ ಪೂರ್ಣಗೊಳ್ಳುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಕೈ ಸೇರುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷೆಗಳು ನಿಜವಾಗುತ್ತವೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಕುಟುಂಬ ಸದಸ್ಯರೊಂದಿಗೆ ಶುಭಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಬೂದು
ಮಕರ ರಾಶಿ
ಮಕ್ಕಳ ಶೈಕ್ಷಣಿಕ ವಿಚಾರಗಳು ನಿರುತ್ಸಾಹ ಗೊಳಿಸುತ್ತವೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ ಕಣ್ಣಿನ ಸಂಬಂಧಿತ ಆರೋಗ್ಯ ಸಮಸ್ಯೆಗಳು ಸ್ವಲ್ಪಮಟ್ಟಿಗೆ ನೋವುಂಟು ಮಾಡುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಕುಂಭ ರಾಶಿ
ಬಾಲ್ಯ ಮಿತ್ರರೊಂದಿಗೆ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಮಕ್ಕಳ ವಿವಾಹದ ವಿಚಾರದ ಪ್ರಸ್ಥಾವನೆಯಾಗುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ವೇಗ ಗೊಳ್ಳುತ್ತವೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ದೊರೆಯುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ
ಮೀನ ರಾಶಿ
ಕೈಗೆತ್ತಿಕೊಂಡ ಕೆಲಸಗಳಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ವೆ. ವ್ಯಾಪಾರ ಪಾಲುದಾರ ರಿಂದ ನಿರೀಕ್ಷಿತ ಸಹಾಯ ದೊರೆಯುತ್ತವೆ. ಉದ್ಯೋಗದ ವಾತಾವರಣವು, ಶಾಂತಿಯುತ ವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ