ಮೇಷ ರಾಶಿ
ವ್ಯಾಪಾರ ಅಭಿವೃದ್ಧಿಗಾಗಿ ಪಟ್ಟ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ. ಬುದ್ಧಿವಂತಿಕೆಯಿಂದ ವೃತ್ತಿಪರ ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಕೆಲವು ವಿಚಾರಗಳಲ್ಲಿ ಬಂಧುಗಳ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಅಗತ್ಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ವೃಷಭ ರಾಶಿ
ಮಾನಸಿಕ ಪ್ರಶಾಂತತೆ ದೊರೆಯುತ್ತದೆ. ವ್ಯಾಪಾರಗಳು ಲಾಭದಾಯಕವಾಗಿಸಾಗುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಉದ್ಯೋಗದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಮೌಲ್ಯದ ವಸ್ತ್ರಆಭರಣಗಳನ್ನು ಖರೀದಿಸಲಾಗುತ್ತದೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ದೀರ್ಘಕಾಲದ ಸಮಸ್ಯೆಗಳು ದೂರವಾಗುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಬೂದು
ಮಿಥುನ ರಾಶಿ
ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಮನೆಯ ಹೊರಗೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿ ಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಸಾಲದ ಹೊರೆ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ. ಆರೋಗ್ಯದ ಬಗ್ಗೆ ಕಾಳಜಿವಹಿಸ ಬೇಕಾಗುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕಟಕ ರಾಶಿ
ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಪ್ರಮುಖ ವ್ಯವಹಾರಗಳಲ್ಲಿ ಆಲೋಚನೆಗಳ ಸ್ಥಿರತೆಯ ಕೊರತೆಯಿಂದ ನಷ್ಟಗಳು ಉಂಟಾಗುತ್ತವೆ. ಆಪ್ತರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ನಿರುತ್ಸಾಹ ಗೊಳಿಸುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣಹಳದಿ
ಸಿಂಹ ರಾಶಿ
ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ಕೇಳಿ ಬರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತಪ್ರಗತಿ ಕಂಡುಬರುತ್ತದೆ. ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿ ಸಾಗುತ್ತವೆ. ಹೊಸ ವ್ಯವಹಾರಗಳ ಹೂಡಿಕೆಗೆ ಸ್ನೇಹಿತರಿಂದ ಹಣಕಾಸಿನ ಸಹಾಯವನ್ನು ದೊರೆಯುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ ಮತ್ತು ಸ್ನೇಹಿತರಿಂದ ಶುಭ ಸುದ್ದಿ ಸಿಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಪ್ರಶಂಸೆ ಪಡೆಯುತ್ತೀರಿ.ವ್ಯಾಪಾರ ವಿಸ್ತರಣೆ ಪ್ರಯತ್ನಗಳು ಫಲ ನೀಡುತ್ತವೆ. ನಿರುದ್ಯೋಗಿಗಳ ಕನಸುಗಳು ನನಸಾಗಲಿವೆ. ಹೊಸ ವಾಹನ ಖರೀದಿಗೆ ಇದ್ದ ಅಡೆತಡೆಗಳು ದೂರವಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಹಸಿರು
ತುಲಾ ರಾಶಿ
ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಗಳು ಎದುರಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಕೋಪಕ್ಕೆ ಗುರಿಯಾಗ ಬೇಕಾಗುತ್ತದೆ. ವೃತ್ತಿಪರ ವ್ಯವಹಾರಗಳು ಸೀಮಿತವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕಿತ್ತಳೆ
ವೃಶ್ಚಿಕ ರಾಶಿ
ವ್ಯಾಪಾರದಲ್ಲಿ ಪಾಲುದಾರರೊಂದಿಗಿನ ವಿವಾದಗಳು ನಿವಾರಣೆಯಾಗುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಆತುರದಿಂದ ಕೆಲಸಗಳುಸಕಾಲದಲ್ಲಿ ಪೂರ್ಣಗೊಳ್ಳುವುದಿಲ್ಲ. ವೃತ್ತಿಪರ ಉದ್ಯೋಗಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಬಂಧುಗಳಿಂದ ಅನಿರೀಕ್ಷಿತ ಒತ್ತಡ ಉಂಟಾಗುತ್ತದೆ. ಕುಟುಂಬದ ಸದಸ್ಯರ ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಧನಸ್ಸು ರಾಶಿ
ಉದ್ಯೋಗದಲ್ಲಿನ ವಿವಾದಗಳು ಬಗೆಹರಿಯುತ್ತವೆ. ಕುಟುಂಬದ ಸದಸ್ಯರ ನೆರವಿನಿಂದ ಧೀರ್ಘಕಾಲ ದಿಂದ ಪೂರ್ಣಗೊಲ್ಲದ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ವೃತ್ತಿಪರ ವ್ಯವಹಾರದಲ್ಲಿನ ಸಮಸ್ಯೆಗಳನ್ನು ನಿವಾರಿಸುತ್ತೀರ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಹೆಚ್ಚಾಗುತ್ತವೆ. ಬಂಧುಗಳಿಂದ ಸಿಗುವ ಮಾಹಿತಿ ಅಚ್ಚರಿ ಮೂಡಿಸುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಬೂದು
ಮಕರ ರಾಶಿ
ಉದ್ಯೋಗದಲ್ಲಿ ಸ್ಥಾನಚಲನೆ ಸೂಚನೆಗಳಿವೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯ ಸೀಮಿತವಾಗಿರುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ವೃತ್ತಿ ವ್ಯವಹಾರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ. ಸಮಯಕ್ಕೆ ಸರಿಯಾಗಿ ವ್ಯವಹಾರಗಳನ್ನು ಪೂರ್ಣಗೊಳ್ಳದೆ ಕಿರಿಕಿರಿ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಕುಂಭ ರಾಶಿ
ಆತ್ಮೀಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಆರ್ಥಿಕ ಪ್ರಗತಿ ಉಂಟಾಗುತ್ತದೆ. ಹೊಸ ಉಪಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಭೋಜನ ಮನೋರಂಜನಾ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ಬೆಲೆಬಾಳುವ ವಸ್ತ್ರ ಆಭರಣಗಳನ್ನು ಖರೀದಿಸಲಾಗುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ
ಮೀನ ರಾಶಿ
ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವ್ಯಾಪಾರ ಮಂದಗತಿಯಲ್ಲಿ ಸಾಗುತ್ತದೆ. ಹೆಚ್ಚಿನ ಶ್ರಮದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ನಿರುದ್ಯೋಗ ಪ್ರಯತ್ನಗಳು ಕೂಡಿಬರುವುದಿಲ್ಲ. ಬಂಧುಗಳಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತದೆ. ಕೆಲವು ವ್ಯವಹಾರಗಳ ವಿಚಾರಗಗಳಲ್ಲಿ ಯೋಚಿಸಿ ಮುನ್ನಡೆಯುವುದು ಉತ್ತಮ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ