ಮೇಷ ರಾಶಿ
ಅನಾರೋಗ್ಯ ಸಮಸ್ಯೆಗಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವಿದ್ಯಾರ್ಥಿಗಳ ಫಲಿತಾಂಶಗಳು ನಿರುತ್ಸಾಹಗೊಳಿಸುತ್ತವೆ. ಬಾಲ್ಯದ ಸ್ನೇಹಿತರೊಡನೆ ವಿವಾದದ ಸೂಚನೆಗಳಿವೆ, ಕೆಲವು ಕಾರ್ಯಗಳು ದೇವರ ಕೃಪೆಯಿಂದ ಪೂರ್ಣಗೊಳ್ಳುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಸ್ತವ್ಯಸ್ತ ವಾತಾವರಣವಿರುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಬಿಳಿ
ವೃಷಭ ರಾಶಿ
ಸಾಲಗಾರರಿಂದ ಸಾಲದ ಒತ್ತಡ ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಕೈಗೊಂಡ ಕೆಲಸಗಳು ಮುಂದೂಡಲ್ಪಡುತ್ತವೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ. ಉದ್ಯೋಗಿಗಳಿಗೆ ಅಧಿಕಾರಿಗಳೊಂದಿಗೆ ಹೊಸ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕವಾಗಿ ಖಿನ್ನತೆಯ ವಾತಾವರಣವಿರುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ: ಬೂದು ಬಣ್ಣ
ಮಿಥುನ ರಾಶಿ
ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಮಂತ್ರಣಗಳು ದೊರೆಯುತ್ತವೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆರ್ಥಿಕ ವೃದ್ಧಿಯಾಗುತ್ತದೆ. ಸಮಾಜದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಕೌಟುಂಬಿಕ ವಿಷಯದಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ವಾತಾವರಣ ತೃಪ್ತಿದಾಯಕವಾಗಿರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಕಟಕ ರಾಶಿ
ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಪ್ರಮುಖ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ಲಾಭದಾಯಕ ವಾಗಿರುತ್ತವೆ. ಬಾಲ್ಯದ ಸ್ನೇಹಿತರ ಭೇಟಿ ಸಂತೋಷವನ್ನು ತರುತ್ತದೆ ಮತ್ತು ಹೊಸ ಧನ ಮತ್ತು ವಸ್ತು ಲಾಭವನ್ನು ಪಡೆಯುತ್ತೀರಿ. ಹೊಸ ವಾಹನವನ್ನು ಖರೀದಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳು ಹೆಚ್ಚು ಉತ್ಸಾಹದಯಕವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಕೆಂಪು
ಸಿಂಹ ರಾಶಿ
ಆತ್ಮೀಯರೊಂದಿಗೆ ಮಾತಿನ ಚಕಮಕಿ ನಡೆಯುತ್ತದೆ. ಅಗತ್ಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ. ಪ್ರಮುಖವಾದ ಕೆಲಸಗಳು ಮದ್ಯದಲ್ಲಿ ನಿಲ್ಲುತ್ತವೆ. ಆರೋಗ್ಯ ಸಮಸ್ಯೆಗಳಿಂದ ಕಿರಿಕಿರಿಗಳು ಉಂಟಾಗುತ್ತವೆ. ವೃತ್ತಿ ಪರ ವ್ಯಾಪಾರಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ಮನೆಯ ಹೊರಗಿನ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ಸಮರ್ಪಕ ವಿಶ್ರಾಂತಿ ಇರುವುದಿಲ್ಲ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತೀರಿ. ಆರೋಗ್ಯ ವಿಷಯಗಳಲ್ಲಿ ಜಾಗರೂಕರಾಗಿರಿ. ವೃತ್ತಿ ಮತ್ತು ಉದ್ಯೋಗಗಳು ನಿರುತ್ಸಾಹದಾಯಕವಾಗಿರುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ತುಲಾ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಬಂಧು ಮಿತ್ರರಿಂದ ಶುಭಕಾರ್ಯಕ್ಕೆ ಆಹ್ವಾನ ದೊರೆಯುತ್ತದೆ. ಹೊಸ ವಾಹನ ಖರೀದಿ ಯೋಗವಿದೆ. ಬಂಧು ಮಿತ್ರರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಸ್ಥಿರಾಸ್ತಿ ವಿವಾದಗಳು ಪರಿಹಾರದತ್ತ ಸಾಗುತ್ತವೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ಉದ್ಯೋಗ ಅನುಕೂಲತೆ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೇರಳೆ
ವೃಶ್ಚಿಕ ರಾಶಿ
ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಉದರ ಸಂಬಂಧಿ ಕಾಯಿಲೆಗಳು ಕಾಡುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಕುಟುಂಬದವರೊಂದಿಗೆ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ. ಆರ್ಥಿಕ ಸಮಸ್ಯೆಗಳು ಉಂಟಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಧನಸ್ಸು ರಾಶಿ
ಮನೆಯ ಹೊರಗೆ ಜನಪ್ರಿಯತೆ ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗೆ ಭೋಜನಾ, ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ, ಸಮಾಜದಲ್ಲಿ ಹಿರಿಯರಿಂದ ಪ್ರಶಂಸೆಗೆ ಒಳಗಾಗುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವ್ಯಾಪಾರ ವಿಸ್ತರಣೆಯ ಹೊಸ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕೆಂಪು
ಮಕರ ರಾಶಿ
ವೃತ್ತಿ ವ್ಯವಹಾರಗಳಲ್ಲಿ ಶ್ರಮಶೀಲತೆ ಹೆಚ್ಚಾಗುತ್ತದೆ. ಮನೆಯ ಹೊರಗಿನ ಒತ್ತಡದಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಪ್ರಮುಖ ವ್ಯವಹಾರಗಳು ಮಂದಗತಿಯಲ್ಲಿ ಸಾಗುತ್ತವೆ . ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಸಿರು
ಕುಂಭ ರಾಶಿ
ಆರ್ಥಿಕ ಪ್ರಗತಿಯನ್ನು ಸಾಧಿಸುತ್ತೀರಿ. ಹೊಸ ವಸ್ತು ಮತ್ತು ವಸ್ತ್ರ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ ದೂರದ ಬಂಧುಗಳಿಂದ ಶುಭ ಸಮಾಚಾರ ದೊರೆಯುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಮೀನ ರಾಶಿ
ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಕೆ ಮನ್ನಣೆ ದೊರೆಯುತ್ತದೆ. ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ವ್ಯಾಪಾರಗಳು ನಿರೀಕ್ಷಿಸಿದಂತೆ ನಡೆಯುತ್ತವೆ. ಬಾಲ್ಯ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ. ಆದಾಯ ಹೆಚ್ಚಾಗುತ್ತದೆ. ವ್ಯಾಪಾರಗಳು ಹೊಸ ಉತ್ಸಾಹದೊಂದಿಗೆ ಲಾಭವನ್ನು ಪಡೆಯುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು