ಮೇಷ ರಾಶಿ
ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಮೌಲ್ಯಯುತವಾದ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಬಡ್ತಿ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ
ವೃಷಭ ರಾಶಿ
ಬಂಧು ಮಿತ್ರರಿಂದ ಶುಭಕಾರ್ಯಕ್ಕೆ ಆಹ್ವಾನಗಳು ದೊರೆಯಲಿವೆ. ಆರ್ಥಿಕವಾಗಿ ಅನುಕೂಲಕರವಾದ ವಾತಾವರಣವಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಯೋಜನೆಗಳು ಕಾರ್ಯರೂಪಗೊಳ್ಳುತ್ತವೆ. ಶತ್ರುಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ವೃತ್ತಿ ವ್ಯವಹಾರಗಳು ತೃಪ್ತಿಕರವಾಗಿ ಸಾಗಲಿದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು
ಮಿಥುನ ರಾಶಿ
ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣದಲ್ಲಿ ಶ್ರಮ ಅಧಿಕವಾಗಿರುತ್ತದೆ. ಉದ್ಯೋಗ ವಾತಾವರಣವು ಸ್ವಲ್ಪ ಕಿರಿಕಿರಿಯುಂಟುಮಾಡುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಳದಿ
ಕಟಕ ರಾಶಿ
ಮನೆಯ ಹೊರಗಿನ ಹೆಚ್ಚುವರಿ ಜವಾಬ್ದಾರಿಗಳಿಂದ ಕಿರಿಕಿರಿ ಹೆಚ್ಚಾಗುತ್ತದೆ. ಮಾನಸಿಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಹೊಸ ಸಾಲವನ್ನು ತೆಗೆದುಕೊಳ್ಳ ಬೇಕಾಗುತ್ತದೆ. ಬಂಧು ಮಿತ್ರರೊಡನೆ ಸಣ್ಣ ಪುಟ್ಟ ಮಾತಿನ ಚಕಮಕಿ ನಡೆಯುತ್ತದೆ. ವ್ಯಾಪಾರಗಳಲ್ಲಿ ಅಲ್ಪ ಲಾಭವಿರುತ್ತದೆ. ಉದ್ಯೋಗಿಗಳಿಗೆ ಆಕಸ್ಮಿಕ ಸ್ಥಾನಚಲನೆ ಸೂಚನೆಗಳಿವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ
ಸಿಂಹ ರಾಶಿ
ಕುಟುಂಬದ ಸದಸ್ಯರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಎಲ್ಲಾ ಕಡೆಯಿಂದ ಆದಾಯ ಬರಲಿದೆ. ಪ್ರಯಾಣದಲ್ಲಿ ಹೊಸ ವ್ಯಕ್ತಿಗಳ ಪರಿಚಯಗಳು ಲಾಭದಾಯಕವಾಗಿರುತ್ತವೆ. ವ್ಯಾಪಾರ ವಿಸ್ತರಣೆಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವೃತ್ತಿ ಮತ್ತು ಉದ್ಯೋಗಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗುತ್ತವೆ. ಆರ್ಥಿಕವಾಗಿ ಅನುಕೂಲತೆ ದೊರೆಯುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕಿತ್ತಳೆ
ಕನ್ಯಾ ರಾಶಿ
ಅನಗತ್ಯ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ವಿಷಯಗಳಲ್ಲಿ ದ್ವಂದ್ವ ಆಲೋಚನೆ ಮಾಡುವುದು ಒಳ್ಳೆಯದಲ್ಲ. ಪ್ರಮುಖ ವ್ಯವಹಾರಗಳು ಸ್ವಲ್ಪ ನಿಧಾನವಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ, ನಿರುದ್ಯೋಗಿಗಳು ಕೆಲವು ವಿಷಯಗಳಲ್ಲಿ ಹತಾಶೆಗೊಳ್ಳುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು
ತುಲಾ ರಾಶಿ
ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿರುತ್ತವೆ. ಮಿತ್ರರಿಂದ ಅನಿರೀಕ್ಷಿತ ಸಹಾಯ ದೊರೆಯಲಿದೆ. ಮನೆಯ ಹೊರಗೆ ಹೆಚ್ಚು ಉತ್ಸಾಹದಿಂದ ಮುನ್ನಡೆಯುತ್ತೀರಿ. ಹೊಸ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿಯನ್ನು ಸಾದಿಸುತ್ತೀರಿ. ವೃತ್ತಿಪರ ಕೆಲಸಗಳಲ್ಲಿ ಅಪ್ರಯತ್ನವಾಗಿ ಕಾರ್ಯಸಿದ್ದಿ ದೊರೆಯುತ್ತದೆ. ದೂರದ ಬಂಧುಗಳಿಂದ ಶುಭ ಕಾರ್ಯಕ್ಕೆ ಆಮಂತ್ರಣಗಳು ದೊರೆಯುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ವೃಶ್ಚಿಕ ರಾಶಿ
ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ನಿರುದ್ಯೋಗಿಗಳು ಸ್ವಲ್ಪ ತಾಳ್ಮೆಯಿಂದ ಪ್ರಯತ್ನಗಳನ್ನು ಮಾಡಬೇಕು. ಹಣಕಾಸಿನ ವಿಚಾರದಲ್ಲಿ ಕೊರತೆಗಳು ಉಂಟಾಗುತ್ತವೆ. ನೇತ್ರ ಸಂಬಂಧಿ ಕಾಯಿಲೆಗಳು ನೋವಿನಿಂದ ಕೂಡಿರುತ್ತವೆ. ಕುಟುಂಬ ಸದಸ್ಯರ ನಡವಳಿಕೆಯು ಆಶ್ಚರ್ಯವನ್ನುಂಟು ಮಾಡುತ್ತದೆ. ವೃತ್ತಿಪರ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಧನಸ್ಸು ರಾಶಿ
ಸಮಾಜದಲ್ಲಿ ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತವೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯಸಿದ್ದಿ ದೊರೆಯುತ್ತದೆ. ಯೋಜನೆಗಳು ಕಾರ್ಯರೂಪಕ್ಕೆ ಬರುತ್ತವೆ. ಭೂಮಿಗೆ ಸಂಬಂಧಿಸಿದ ವಿವಾದಗಳು ಇತ್ಯರ್ಥವಾಗುತ್ತವೆ ಮತ್ತು ವ್ಯಾಪಾರಗಳಿಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ
ಮಕರ ರಾಶಿ
ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ, ದೈವಿಕ ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ. ದೂರ ಪ್ರಯಾಣವು ಲಾಭದಾಯಕವಾಗಿರುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳಿಂದ ಆಹ್ವಾನಗಳು ದೊರೆಯುತ್ತವೆ. ವೃತ್ತಿ ವ್ಯವಹಾರದಲ್ಲಿನ ಸಮಸ್ಯೆಗಳು ನಿವಾರಣೆಯಾಗಿ ಲಾಭಗಳು ದೊರೆಯುತ್ತವೆ. ನಿರುದ್ಯೋಗಿಗಳು ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಬೇಕು.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕುಂಭ ರಾಶಿ
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಮನೆಯಲ್ಲಿ ಕೆಲವರ ವರ್ತನೆಯಿಂದ ಭಾವನಾತ್ಮಕ ಕಿರಿಕಿರಿಯನ್ನು ಉಂಟುಮಾಡುತ್ತದೆ. ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಋಣಾತ್ಮಕ ವಾತಾವರಣವಿರುತ್ತದೆ. ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಉದ್ಯೋಗಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಂಡು ತೊಂದರೆಗೆ ಒಳಗಾಗುತ್ತೀರಿ. ವ್ಯಾಪಾರದಲ್ಲಿ ಹಣಕಾಸಿನ ತೊಂದರೆಗಳು ಉಂಟಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಹಳದಿ
ಮೀನ ರಾಶಿ
ಕುಟುಂಬ ವ್ಯವಹಾರಗಳಲ್ಲಿ ಹೆಚ್ಚಿನ ತೊಂದರೆಯೊಂದಿಗೆ ನೀವು ಕಡಿಮೆ ಫಲಿತಾಂಶಗಳನ್ನು ಪಡೆಯುತ್ತೀರಿ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಹಣಕಾಸಿನ ಸಮಸ್ಯೆಗಳು ಬಾಧಿಸುತ್ತವೆ. ವಾಹನ ಪ್ರಯಾಣ ವಿಷಯದಲ್ಲಿ ಜಾಗ್ರತೆ ವಹಿಸಬೇಕು. ವ್ಯಪಾರದಲ್ಲಿ ಏರುಪೇರುಗಳು ಹೆಚ್ಚಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದಹೊರೆ ಹೆಚ್ಚಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ