ಇಂದಿನ ರಾಶಿ ಭವಿಷ್ಯ ಮಾರ್ಚ್-04-2024 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ

  • Prasad Kambar
  • 4 Mar 2024 , 7:43 AM
  • Belagavi
  • 610

ಮೇಷ ರಾಶಿ

ಸೇವಾ ಕಾರ್ಯಕ್ರಮಗಳನ್ನು ಮಾಡುವುದರಿಂದ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯಲಿದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ, ಮೂಲಕ ನೀವು ಲಾಭವನ್ನು ಪಡೆಯುತ್ತೀರಿ. ಭೂಮಿ ಮಾರಾಟದಲ್ಲಿ ನೀವು ಹೊಸ ಲಾಭವನ್ನು ಪಡೆಯುತ್ತೀರಿ. ವಾಹನ ಖರೀದಿ ಪ್ರಯತ್ನದಲ್ಲಿ ಅಡೆತಡೆಗಳು ದೂರವಾಗುತ್ತವೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಹಸಿರು

ವೃಷಭ ರಾಶಿ

ದೂರಪ್ರಯಾಣದ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ಸೀಮಿತವಾಗಿ ಸಾಗುತ್ತವೆ. ದೀರ್ಘಕಾಲದ ವಿವಾದಗಳಿಂದ ಸ್ವಲ್ಪ ಮಟ್ಟಿಗೆ ಹೊರಬರುತ್ತೀರಿ. ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಟೀಕೆಗಳು ಎದುರಾಗುತ್ತವೆ. ಕುಟುಂಬದ ಸದಸ್ಯರ ವರ್ತನೆಯು ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ. ಹಣಕಾಸಿನ ತೊಂದರೆ ಉಂಟಾಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

ಮಿಥುನ ರಾಶಿ

ಸಾಲಗಾರರ ಒತ್ತಡದಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ, ಕೈಗೊಂಡ ಕೆಲಸಗಳು ಹೆಚ್ಚಿನ ಶ್ರಮದಿಂದ ಪೂರ್ಣಗೊಳ್ಳುತ್ತವೆ. ನಿರುದ್ಯೋಗಿಗಳಿಗೆ ನಿರಾಶೆ ಉಂಟಾಗುತ್ತದೆ. ಪ್ರಮುಖ ವ್ಯವಹಾರಗಳ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಬಿಳಿ

ಕರ್ಕ ರಾಶಿ

ಬೆಲೆಬಾಳುವ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯಸಿದ್ದತೆ ಉಂಟಾಗುತ್ತದೆ. ಮಕ್ಕಳ ವಿದ್ಯಾಭ್ಯಾಸದ ವಿಷಯಗಳು ತೃಪ್ತಿಕರವಾಗಿರುತ್ತವೆ. ಸಮಾಜದಲ್ಲಿ ಬೆಂಬಲ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲಾಗುತ್ತದೆ. ಸಹೋದ್ಯೋಗಿಗಳೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದು

ಸಿಂಹ ರಾಶಿ

ನಿರುದ್ಯೋಗ ಪ್ರಯತ್ನಗಳು ಕೂಡಿ ಬರುತ್ತವೆ. ಕೈಗೊಂಡ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಕಾರ್ಯಸಿದ್ದತೆ ಉಂಟಾಗುತ್ತದೆ. ಉದ್ಯೋಗಿಗಳಿಗೆ ಬಡ್ತಿ ಹೆಚ್ಚಾಗುತ್ತದೆ ಮತ್ತು ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣ ಮಾಡುತ್ತೀರಿ. ಹೊಸ ವ್ಯಕ್ತಿಗಳ ಭೇಟಿಯು ಲಭದಾಯಕವಾಗಿ ಸಾಗುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕಿತ್ತಳೆ

ಕನ್ಯಾ ರಾಶಿ

ವೃತ್ತಿ ಮತ್ತು ವ್ಯಾಪಾರ ಸಾಮಾನ್ಯವಾಗಿ ಸಾಗುತ್ತವೆ. ಬಾಲ್ಯದ ಸ್ನೇಹಿತರೊಂದಿಗೆ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಹಣಕಾಸಿನ ವಿಷಯಗಳ ಬಗ್ಗೆ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕೈಗೊಂಡ ವ್ಯವಹಾರಗಳಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಗೃಹ ನಿರ್ಮಾಣ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಕೆಂಪು

ತುಲಾ ರಾಶಿ

ಮಿತ್ರರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರ ನಿಧಾನವಾಗಿ ಸಾಗುತ್ತದೆ. ಮನೆಯ ಹೊರಗಿನ ಕೆಲವರ ವರ್ತನೆಯಿಂದ ಮಾನಸಿಕ ನೆಮ್ಮದಿ ಇಲ್ಲವಾಗುತ್ತದೆ. ಉದ್ಯೋಗದ ವಾತಾವರಣವು ನಿರುತ್ಸಾಹಗೊಳಿಸುತ್ತದೆ. ದೂರ ಪ್ರಯಾಣಗಳಲ್ಲಿ ರಸ್ತೆ ಅಡೆತಡೆಗಳು ಉಂಟಾಗುತ್ತವೆ ಮತ್ತು ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕಿತ್ತಳೆ

ವೃಶ್ಚಿಕ ರಾಶಿ

ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ದೀರ್ಘಕಾಲದ ವಿವಾದಗಳು ಇತ್ಯರ್ಥವಾಗುತ್ತವೆ. ನಿರುದ್ಯೋಗಿಗಳಿಗೆ ದೊರೆಯುವ ಮಾಹಿತಿ ಉತ್ಸಾಹದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ದೊರೆಯುತ್ತದೆ. ಸಹೋದರ ರಿಂದ ಶುಭ ಸುದ್ದಿ. ಹೊಸ ವಾಹನ ಖರೀದಿಸುತ್ತೀರಿ. ಸ್ನೇಹಿತರೊಂದಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಕೆಂಪು

ಧನು ರಾಶಿ

ನೇತ್ರ ಸಂಬಂಧಿ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೌಟುಂಬಿಕ ವಾತಾವರಣ ಸ್ವಲ್ಪ ಅಸ್ತವ್ಯಸ್ತವಾಗಿರುತ್ತದೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಕೂಡಿ ಬರುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತವೆ. ಕೈಗೊಂಡ ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದು

ಮಕರ ರಾಶಿ

ಆತ್ಮೀಯ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತೀರಿ. ಆದಾಯ ತೃಪ್ತಿಕರವಾಗಿರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಆಲೋಚನೆಗಳನ್ನು ಕಾರ್ಯ ರೂಪಕ್ಕತಂದು ಲಾಭವನ್ನು ಪಡೆಯಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಅವಕಾಶಗಳು ದೊರೆಯುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಹಠಾತ್ಯಶಸ್ಸನ್ನು ಪಡೆಯುತ್ತೀರಿ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಹಸಿರು

ಕುಂಭ ರಾಶಿ

ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ದೂರ ಪ್ರಯಾಣಗಳು ಮುಂದೂಡಲ್ಪಡುತ್ತವೆ. ಉದ್ಯೋಗದಲ್ಲಿ ಋಣಾತ್ಮಕ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ಅನಗತ್ಯವಿವಾದಗಳು ಉಂಟಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.  

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಕೆಂಪು

ಮೀನ ರಾಶಿ

ನಿರುದ್ಯೋಗಿಗಳಿಗೆ ಅನುಕೂಲಕರ ವಾತಾವರಣ ವಿರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ಸಾಹದಿಂದ ಮುನ್ನಡೆಯುತ್ತೀರಿ ಮತ್ತು ಅಧಿಕಾರಿಗಳ ಬೆಂಬಲ ದೊರೆಯುತ್ತದೆ. ಹಣಕಾಸಿನ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

Read All News