ಇಂದಿನ ರಾಶಿ ಭವಿಷ್ಯ ಮಾರ್ಚ್-09-2024 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ

  • Prasad Kambar
  • 9 Mar 2024 , 7:26 AM
  • Belagavi
  • 461

ಮೇಷ ರಾಶಿ

ಹಳೆಯ ಸ್ನೇಹಿತರ ಭೇಟಿ ಸಂತಸ ತರುತ್ತದೆ. ಮನೆಯಲ್ಲಿ ಮಕ್ಕಳ ಶುಭ ಕಾರ್ಯಗಳ ಬಗ್ಗೆ ಪ್ರಸ್ತಾಪಿಸಲಾಗುತ್ತದೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದಾಯಕವಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ನಿಗದಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ಹಸಿರು

ವೃಷಭ ರಾಶಿ

ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಸಂಗಾತಿಯೊಂದಿಗೆ ವಿನಾಕಾರಣವಾದ ವಿವಾದಗಳು ಉಂಟಾಗುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಪಾಲುದಾರರ ವರ್ತನೆಯು ಕಿರಿಕಿರಿಯುಂಟು ಮಾಡುತ್ತದೆ. ಸಾಲದ ಒತ್ತಡ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ಮಿಥುನ ರಾಶಿ

ಪ್ರಮುಖ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಲಾಭ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ವೃತ್ತಿಪರ ವ್ಯಾಪಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯಗಳು ಹೆಚ್ಚಾಗುತ್ತವೆ.

ಅದೃಷ್ಟದ ದಿಕ್ಕು:ವಾಯುವ್ಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ಕರ್ಕ ರಾಶಿ

ಬೆಲೆ ಬಾಳುವವಸ್ತ್ರಆಭರಣಗಳನ್ನು ಖರೀದಿಸಲಾಗುತ್ತದೆ. ಬಂಧು ಮಿತ್ರರ ಹೊಸ ವಿಷಯಗಳನ್ನು ಸಂಗ್ರಹಿಸಲಾಗುತ್ತದೆ. ವೃತ್ತಿ ವ್ಯಾಪಾರಗಳಲ್ಲಿ ನಿಮ್ಮ ಪ್ರಯತ್ನಗಳಿಗೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆಗಿನ ಚರ್ಚೆಗಳು ಫಲ ನೀಡುತ್ತದೆ. ಬಾಲ್ಯದ ಸ್ನೇಹಿತರಿಂದ ಶುಭ ಸುದ್ದಿ ದೊರೆಯುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕಿತ್ತಳೆ

ಸಿಂಹ ರಾಶಿ

ವೃತ್ತಿ,ವ್ಯಾಪಾರಗಳು ನಿರಾಶಾದಾಯಕವಾಗಿರುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ಹಠಾತ್ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಮನೆಯ ಹೊರಗೆಕೆಲವುಸಮಸ್ಯೆಗಳಿರುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೀಲಿ

ಕನ್ಯಾ ರಾಶಿ

ಕುಟುಂಬ ಸದಸ್ಯರೊಂದಿಗೆ ಆಧ್ಯಾತ್ಮಿಕ ಸೇವಾಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಸ್ಥಿರಾಸ್ತಿಯ ವಿವಾದಗಳು ಕಿರಿಕಿರಿಯುಂಟು ಮಾಡುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ಇತರರಿಗೆ ಹಣದ ವಿಷಯದಲ್ಲಿ ಮಾತುಕೊಡುವುದು ಒಳ್ಳೆಯದಲ್ಲ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಮನ್ನಣೆ ಸಿಗುವುದಿಲ್ಲ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಬಿಳಿ

ತುಲಾ ರಾಶಿ

ಹಳೆ ಸಾಲ ವಸೂಲಿಯಾಗುತ್ದೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ವಿಸ್ತಾರವಾಗುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳು ಹೆಚ್ಚು ಅನುಕೂಲಕರವಾಗಿರುತ್ತವೆ. ಹಳೆಯ ಸಾಲಗಳನ್ನು ತೀರಿಸುತ್ತೀರಿ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ವೃಶ್ಚಿಕ ರಾಶಿ

ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ಬರಬೇಕಾದ ಹಣ ಸಕಾಲಕ್ಕೆ ದೊರೆಯುತ್ತದೆ ವೃತ್ತಿ ಮತ್ತು ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಆಶ್ಚರ್ಯಗೊಳಿಸುತ್ತವೆ.ದೀರ್ಘ ಕಾಲದಿಂದ ಪೂರ್ಣಗೊಳ್ಳದ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಕೆಂಪು

ಧನು ರಾಶಿ

ಆತ್ಮೀಯ ಸ್ನೇಹಿತರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆರೋಗ್ಯದ ಬಗ್ಗೆ ಶ್ರದ್ಧೆ ವಹಿಸಬೇಕು. ವೃತ್ತಿ ಮತ್ತು ವ್ಯಾಪಾರ ಸ್ವಲ್ಪಮಟ್ಟಿಗೆ ಮಂದಗತಿಯಲ್ಲಿ ಸಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನ ಫಲಿಸುವುದಿಲ್ಲ. ಬಂಧುಗಳೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ದೂರದ ಪ್ರಯಾಣದ ಸೂಚನೆಗಳಿವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ಮಕರ ರಾಶಿ

ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಕೈಗೊಂಡ ಕೆಲಸಗಳು ಮುಂದೂಡಲ್ಪಡುತ್ತವೆ. ಬಂಧುಗಳಿಂದ ಅನಿರೀಕ್ಷಿತ ಮಾತುಗಳನ್ನು ಕೇಳ ಬೇಕಾಗುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. ಅಗತ್ಯಕ್ಕೆ ಕುಟುಂಬ ಸದಸ್ಯರ ಸಹಾಯ ಮತ್ತು ಬೆಂಬಲ ಸಿಗದೆ ತೊಂದರೆ ಪಡುತ್ತೀರಿ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೇರಳೆ

ಕುಂಭ ರಾಶಿ

ಕೈಗೊಂಡ ಕೆಲಸಗಳು ಸುಗಮವಾಗಿ ಸಾಗುತ್ತವೆ. ಬಂಧು ಮಿತ್ರರ ಭೇಟಿ ಸಂತಸ ತರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಲಾಭದಾಯಕವಾಗಿರುತ್ತವೆ. ಆಪ್ತ ಸ್ನೇಹಿತರಿಂದ ಶುಭ ಸುದ್ದಿಸಿಗುತ್ತದೆ. ಹಳೆಸಾಲಗಳನ್ನು ವಸೂಲಿ ಮಾಡಲಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ಕಂದು

ಮೀನ ರಾಶಿ

ಕುಟುಂಬ ಸದಸ್ಯರೊಂದಿಗೆ ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಯೋಜಿತಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಿ ಸಮಯಕ್ಕೆ ನಿದ್ರೆ ಆಹಾರ ಇರುವುದಿಲ್ಲ .

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಹಳದಿ

Read All News