ಮೇಷ ರಾಶಿ
ಸಮಾಜದ ಪ್ರಮುಖ ವ್ಯಕ್ತಿಗಳ ಪರಿಚಯಗಳಿಂದ ಪ್ರಮುಖ ಕಾರ್ಯಗಳು ಪೂರ್ಣಗೊಳಿಸುತ್ತೀರಿ. ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ವೃತ್ತಿಪರ ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ವೃಷಭ ರಾಶಿ
ಕುಟುಂಬದ ಸದಸ್ಯರ ಆರೋಗ್ಯ ವಿಚಾರದಲ್ಲಿ ಜಾಗ್ರತೆ ವಹಿಸಬೇಕು. ಮನೆಯ ಹೊರಗಿನ ಜವಾಬ್ದಾರಿಗಳು ಭಾವನಾತ್ಮಕವಾಗಿ ಕಿರಿಕಿರಿಯನ್ನು ಉಂಟುಮಾಡುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಯಾವುದೇ ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ಪ್ರಮುಖ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆ ಇರುವುದಿಲ್ಲ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಮಿಥುನ ರಾಶಿ
ಕುಟುಂಬ ಸದಸ್ಯರೊಂದಿಗೆ ಸ್ಥಿರಾಸ್ತಿ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಸಣ್ಣ ನಷ್ಟಗಳು ಉಂಟಾಗುತ್ತವೆ. ಉದ್ಯೋಗಿಗಳಿಗೆ ಇತರರೊಂದಿಗೆ ವಿವಾದಗಳು ಉಂಟಾಗುತ್ತವೆ. ದೂರದ ಪ್ರಯಾಣದ ವೇಳೆ ರಸ್ತೆ ಅಡೆತಡೆಗಳು ಉಂಟಾಗುತ್ತವೆ. ಸ್ನೇಹಿತರೊಂದಿಗೆ ದೇಗುಲಗಳಿಗೆ ಭೇಟಿ ನೀಡುತ್ತೀರಿ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕರ್ಕ ರಾಶಿ
ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುತ್ತೀರಿ. ಹೊಸ ವ್ಯಾಪಾಗಳನ್ನು ವಿಸ್ತರಿಸುವ ಪ್ರಯತ್ನಗಳು ಫಲ ನೀಡುತ್ತವೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು
ಸಿಂಹ ರಾಶಿ
ವೃತ್ತಿ ವ್ಯಾಪಾರಗಳನ್ನು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಲೋಪಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳು ಮುಂದೂಡಲ್ಪಡುತ್ತವೆ. ಸಹೋದರರೊಂದಿಗೆ ಭೂಮಿಗೆ ಸಂಬಂಧಿಸಿದ ವಿವಾದಗಳು ಕಿರಿಕಿರಿಯುಂಟು ಮಾಡುತ್ತವೆ. ಹಣಕಾಸಿನ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕಣ್ಣಿನ ಸಮಸ್ಯೆಗಳು ನೋವುಂಟು ಮಾಡುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ಪಾಲುದಾರಿಕೆ ವ್ಯವಹಾರಗಳು ಹೂಡಿಕೆಗಳು ದೊರೆಯುತ್ತವೆ. ಮನೆಯಲ್ಲಿ ದೈವಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಯೋಜಿತ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ದೀರ್ಘಾವಧಿಯ ಸಾಲಗಳನ್ನು ತೀರಿಸುತ್ತೀರಿ.
ಅದೃಷ್ಟದ ದಿಕ್ಕು:ವಾಯುವ್ಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ತುಲಾ ರಾಶಿ
ಪ್ರಮುಖ ಕೆಲಸಗಳಲ್ಲಿ ತೆಗೆದುಕೊಳ್ಳುವ ಹಠಾತ್ ನಿರ್ಧಾರಗಳಿಂದ ನಷ್ಟಗಳು ಉಂಟಾಗುತ್ತವೆ. ಗೃಹ ನಿರ್ಮಾಣ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಮನೆಯ ಹೊರಗೆ ಋಣಾತ್ಮಕ ವಾತವರಣ ಇರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಮೇಲಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ವೃಶ್ಚಿಕ ರಾಶಿ
ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿರಸಾಗುತ್ತವೆ. ದೂರದ ಸಂಬಂಧಿಕರಿಂದ ಹಠಾತ್ಆಹ್ವಾನ ದೊರೆಯುತ್ತವೆ. ಕುಟುಂಬದ ಸದಸ್ಯರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯಾಪಾರಗಳು ಅಭಿವೃದ್ಧಿ ಹಾದಿಯಲ್ಲಿ ಸಾಗುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ
ಧನು ರಾಶಿ
ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಮನೆಯಲ್ಲಿ ಮದುವೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಪ್ರಮುಖ ಕಾರ್ಯಕ್ರಗಳನ್ನು ನಿರ್ವಹಿಸಿ ಪ್ರಮುಖ ವ್ಯಕ್ತಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಮಕರ ರಾಶಿ
ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆಧ್ಯಾತ್ಮಿಕ ಸೇವೆಗಳತ್ತ ಗಮನಹರಿಸುತ್ತೀರಿ. ಇತರರೊಂದಿಗೆ ಯೋಚಿಸಿ ಮಾತನಾಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಹೆಚ್ಚುವರಿ ಕೆಲಸದ ಹೊರೆಯ ಹೊರತಾಗಿಯೂ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಕುಂಭ ರಾಶಿ
ಬಂಧು ಮಿತ್ರರಿಂದ ಅನಿರೀಕ್ಷಿತ ಮಾತುಗಳನ್ನು ಕೇಳ ಬೇಕಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ. ದೂರ ಪ್ರಯಾಣದಲ್ಲಿ ಜಾಗ್ರತೆ ವಹಿಸಬೇಕು. ಕುಟುಂಬದ ಮುಖ್ಯಸ್ಥರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೃತ್ತಿಪರ ವ್ಯವಹಾರಗಳಲ್ಲಿ ಹಣಕಾಸಿನ ಸಮಸ್ಯೆಗಳು ಉದ್ಭವಿಸುತ್ತವೆ. ಉದ್ಯೋಗದ ವಾತಾವರಣವು ಸಮಸ್ಯಾತ್ಮಕವಾಗಿರುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ
ಮೀನ ರಾಶಿ
ಧೀರ್ಘಕಾಲದಿಂದ ಕಾಡುತ್ತಿದ್ದ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಪಡೆಯುತ್ತೀರಿ. ಹೊಸ ವ್ಯಾಪಾರ ಆರಂಭಕ್ಕೆ ಆಪ್ತ ಸ್ನೇಹಿತರಿಂದ ಸಹಾಯ ದೊರೆಯುತ್ತದೆ. ಮಕ್ಕಳಿಗೆ ಶಿಕ್ಷಣದಲ್ಲಿ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೇರಳೆ