ಇಂದಿನ ರಾಶಿ ಭವಿಷ್ಯ ಮೇ -14-2024 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ.

  • Prasad Kambar
  • 14 May 2024 , 8:07 AM
  • Belagavi
  • 265

ಮೇಷ ರಾಶಿ

ಆದಾಯ ತೃಪ್ತಿಕರವಾಗಿರುತ್ತದೆ. ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿ ದೊರೆಯುತ್ತದೆ. ಬೇರೆಯವರ ವಿಚಾರದಲ್ಲಿ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಿ ಲಾಭವನ್ನು ಪಡೆಯಲಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೀಲಿ

ವೃಷಭ ರಾಶಿ

ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ವ್ಯಾಪಾರದ ವಿಷಯದಲ್ಲಿ ತಮ್ಮದೇಆದ ಆಲೋಚನೆಗಳನ್ನು ಜಾರಿಗೊಳಿಸಿ ತೊಂದರೆ ಆನುಭವಿಸುತ್ತೀರಿ. ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿ ಇರುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹೊಸ ಸಾಲದ ಪ್ರಯತ್ನಗಳು ವಿಫಲವಾಗುತ್ತವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ಹಳದಿ

ಮಿಥುನ ರಾಶಿ

ದೂರ ಪ್ರಯಾಣಗಳು ಕೂಡಿ ಬರುತ್ತವೆ. ಕೈಗೆತ್ತಿಕೊಂಡ ಪ್ರತಿಯೊಂದು ಕಾರ್ಯವೂ ನಿರಾಯಾಸವಾಗಿ ಪೂರ್ಣಗೊಳ್ಳುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಅನುಕೂಲಕರ ವಾಗಿರುತ್ತದೆ. ವ್ಯಾಪಾರದಲ್ಲಿ ಹೊಸಹೂಡಿಕೆಗಳು ದೊರೆಯುತ್ತವೆ. ಆಧ್ಯಾತ್ಮಿಕ ಚಿಂತನೆ ಮೂಡುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಕೆಂಪು

ಕರ್ಕ ರಾಶಿ

ಮುಖ ವ್ಯವಹಾರಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬ ಸದಸ್ಯರ ಸಹಕಾರದಿಂದ ಕೆಲವು ಸಮಸ್ಯೆಗಳಿಂದ ಮುಕ್ತಿ ಹೊಂದುತ್ತೀರಿ. ಮಕ್ಕಳ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಹಾಜರಾಗುತ್ತೀರಿ. ದೈವಿಕ ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಫಲಿತಾಂಶಗಳು ಸಿಗುತ್ತವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಕಿತ್ತಳೆ

ಸಿಂಹ ರಾಶಿ

ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಬಂಧು ಮಿತ್ರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅಡೆತಡೆಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಯಶಸ್ವಿಯಾಗುತ್ತೀರಿ. ಭೂಮಿ ಮಾರಾಟ ಲಾಭದಾಯಕವಾಗಿರುತ್ತದೆ. ಕುಟುಂಬಸದಸ್ಯರ ಆರೋಗ್ಯದ ಬಗ್ಗೆ ಶುಭಸುದ್ದಿ ಇರುತ್ತದೆ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೇರಳೆ

ಕನ್ಯಾ ರಾಶಿ

ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತವೆ. ಮಹಿಳೆಯರಿಗೆ ಸಂಬಂಧಿಸಿದ ವಿವಾದಗಳಿಂದ ದೂರವಿರುವುದು ಉತ್ತಮ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಲ್ಪ ನಷ್ಟಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ, ಕೆಲಸದ ಒತ್ತಡ ಹೆಚ್ಚಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಸಿರು

ತುಲಾ ರಾಶಿ

ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಿ ಮಧ್ಯದಲ್ಲಿ ನಿಲ್ಲಿಸಲಾಗುತ್ತದೆ. ಬಂಧು ಮಿತ್ರರಿಂದ ಅಚ್ಚರಿಯ ವಿಷಯಗಳು ತಿಳಿದು ಬರುತ್ತವೆ. ವೃತ್ತಿಪರ ಉದ್ಯೋಗಗಳಿಗೆ ಸಹೋದ್ಯೋಗಿಗಳೊಂದಿಗೆ ಭಿನ್ನಭಿಪ್ರಾಯಗಳಿರುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ ಬಣ್ಣ

ವೃಶ್ಚಿಕ ರಾಶಿ

ಶತ್ರುಗಳೂ ಮಿತ್ರರಾಗಿ ಸಹಾಯ ಮಾಡುತ್ತಾರೆ. ಮಕ್ಕಳ ವಿದ್ಯಾಭ್ಯಾಸದ ವಿಷಯಗಳಲ್ಲಿ ಶುಭ ಸುದ್ದಿ ಇರುತ್ತದೆ. ಎಲ್ಲಾ ವರ್ಗದವರು ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತಾರೆ. ಉದ್ಯೋಗಿಗಳಿಗೆ ಹೊಸಹುದ್ದೆಗಳು ದೊರೆಯುತ್ತವೆ. ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಆರ್ಥಿಕವಾಗಿ ಹೆಚ್ಚಿನ ಪ್ರಗತಿ ಸಾಧಿಸುತ್ತೀರಿ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ಧನು ರಾಶಿ

ಮಕ್ಕಳ ಆರೋಗ್ಯದ ವಿಷಯಗಳ ಬಗ್ಗೆ ಗಮನಹರಿಸಬೇಕು. ಹಣಕಾಸಿನ ಸಮಸ್ಯೆಗಳಿರುತ್ತವೆ. ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನಕ್ಕೆ ಅಲ್ಪ ಫಲಿತಾಂಶವನ್ನು ಪಡೆಯುತ್ತೀರಿ. ನಿಮ್ಮ ಮಾತಿಗೆ ಮೌಲ್ಯ ಕಡಿಮೆಯಾಗುತ್ತದೆ. ಹೆಚ್ಚಿದ ಸಾಲದ ಒತ್ತಡದಿಂದ ಮಾನಸಿಕ ಸಮಸ್ಯೆಗಳಿರುತ್ತವೆ. ಹಣಕಾಸಿನ ಏರಿಳಿತಗಳು ಉಂಟಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದು

ಮಕರ ರಾಶಿ

ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಮಕ್ಕಳ ವಿವಾಹ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸಹೂಡಿಕೆ ಮಾಡುವ ಪ್ರಯತ್ನಗಳು ಫಲಿಸುವುದಿಲ್ಲ. ಬಾಲ್ಯದ ಗೆಳೆಯರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗುತ್ತದೆ. ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ಕುಂಭ ರಾಶಿ

ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಸ್ನೇಹಿತರಿಂದ ಅನಿರೀಕ್ಷಿತ ಸಹಾಯ ದೊರೆಯುತ್ತವೆ. ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ಭಾವನಾತ್ಮಕವಾಗಿ ವಾತಾವರಣವು ಉತ್ಸಾಹದಾಯಕ ವಾಗಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಹೊಸ ಯೋಜನೆಗಳೊಂದಿಗೆ ಮುಂದುವರಿಯುತ್ತೀರಿ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. 

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕೆಂಪು

ಮೀನ ರಾಶಿ

ಹಳೆ ಸಾಲ ವಸೂಲಾತಿಯಲ್ಲಿ ವಿಳಂಬ ಉಂಟಾಗುತ್ತದೆ. ದುಬಾರಿ ವಸ್ತುಗಳಿಗೆ ಹಣ ಖರ್ಚು ಮಾಡುತ್ತೀರಿ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಇತರರೊಂದಿಗೆ ಜಾಗರೂಕರಾಗಿರಿ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗುತ್ತವೆ. ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ನೈಋತ್ಯ

Read All News