ಮೇಷ ರಾಶಿ
ದೂರದ ಬಂಧುಗಳ ಆಗಮನ ಸಂತಸ ತರುತ್ತದೆ. ಕೈಗೊಂಡ ವ್ಯವಹಾರಗಳು ಅನುಕೂಲಕರವಾಗಿ ಸಾಗುತ್ತವೆ. ವ್ಯಾಪಾರ ವಿಸ್ತರಣೆಗೆ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತೀರಿ. ಮನೆಯ ವಾತಾವರಣ ಶಾಂತವಾಗಿರುತ್ತದೆ. ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗುತ್ತವೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಕೆಂಪು
ವೃಷಭ ರಾಶಿ
ಪ್ರಯಾಣದಲ್ಲಿ ರಸ್ತೆ ಅಡಚಣೆಗಳು ಉಂಟಾಗುತ್ತವೆ. ಮನೆಯ ಹೊರಗೆ ನಿರುತ್ಸಾಹ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ದೈವಿಕ ಚಿಂತನೆ ಉಂಟಾಗುತ್ತದೆ. ವ್ಯಾಪಾರ-ವ್ಯವಹಾರಗಳು ಸ್ವಲ್ಪ ನಿಧಾನವಾಗಿ ಸಾಗುತ್ತವೆ. ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಹಳದಿ
ಮಿಥುನ ರಾಶಿ
ಮನೆಯಲ್ಲಿ ಕೆಲವು ಆಶ್ಚರ್ಯಕರ ಘಟನೆಗಳು ನಡೆಯುತ್ತವೆ. ಬೆಲೆಬಾಳುವ ವಸ್ತುಗಳು ಉಡುಗೊರೆಯಾಗಿ ದೊರೆಯುತ್ತವೆ. ಸಮಾಜದ ಪ್ರಮುಖರ ಸಹಾಯ ಮತ್ತು ಸಹಕಾರಗಳು ದೊರೆಯುತ್ತವೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ. ನಿರುದ್ಯೋಗ ಸಮಸ್ಯೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಕಟಕ ರಾಶಿ
ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಆತ್ಮೀಯ ಸ್ನೇಹಿತರಿಂದ ಅಮೂಲ್ಯ ಮಾಹಿತಿ ದೊರೆಯುತ್ತದೆ. ಪ್ರಮುಖವಾದ ಸಮಯದಲ್ಲಿ ಕುಟುಂಬ ಸದಸ್ಯರಿಂದ ಸಹಾಯ ದೊರೆಯುತ್ತದೆ. ಬಂಧುಗಳೊಂದಿಗೆ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೆಚ್ಚು ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತೀರಿ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಳದಿ
ಸಿಂಹ ರಾಶಿ
ಆರ್ಥಿಕ ಪರಿಸ್ಥಿತಿ ಅಷ್ಟೊಂದು ಅನುಕೂಲಕರವಾಗಿಲ್ಲದಿದ್ದರೂ ಅಗತ್ಯಕ್ಕೆ ತಕ್ಕಂತೆ ಹಣ ದೊರೆಯುತ್ತದೆ. ಸಹೋದರರೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತದೆ. ಕೆಲವು ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಕಿರಿಕಿರಿಗಳು ಹೆಚ್ಚಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದಿ
ಕನ್ಯಾ ರಾಶಿ
ಭೂಮಿಗೆ ಸಂಬಂಧಿಸಿದ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ವ್ಯಾಪಾರದಲ್ಲಿ ಹೂಡಿಕೆಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ನಿರಾಶಾದಾಯಕವಾಗಿರುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ತುಲಾ ರಾಶಿ
ಕೈಗೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಅವಕಾಶಗಳು ಸಿಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ. ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಹಣಕಾಸಿನ ವ್ಯವಹಾರಗಳು ಅನುಕೂಲಕರವಾಗಿರುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ನೀಲಿ
ವೃಶ್ಚಿಕ ರಾಶಿ
ಹೊಸ ಭೂಮಿ ಮತ್ತು ಗೃಹ ಯೋಗವಿದೆ. ಪ್ರಸಿದ್ಧ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ಪ್ರತಿಭೆ ಬೆಳಕಿಗೆ ಬರುತ್ತದೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಬಗೆಹರಿಯುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಧನಸ್ಸು ರಾಶಿ
ಪ್ರಯಾಣಗಳು ಮುಂದೂಡಲ್ಪಡುತ್ತವೆ. ಕೈಗೊಂಡ ಕೆಲಸದಲ್ಲಿ ಶ್ರಮ ಮತ್ತಷ್ಟು ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ.ಸಾಲದಾತರ ಒತ್ತಡಕ್ಕೆ ಮಣಿದು ಹೊಸ ಸಾಲವನ್ನು ತೆಗೆದುಕೊಳ್ಳಬೇಕಾಗುತ್ತದೆ. ವ್ಯಾಪಾರ-ವ್ಯವಹಾರಗಳು ಮಂದಗತಿಯಲ್ಲಿ ಸಾಗುಟ್ಟವೆ. ಉದ್ಯೋಗಗಳಲ್ಲಿ ಕೆಲವರ ವರ್ತನೆ ತಲೆನೋವು ಉಂಟು ಮಾಡುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ಹಳದಿ
ಮಕರ ರಾಶಿ
ಕುಟುಂಬ ಸದಸ್ಯರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಕಾಳಜಿ ಅಗತ್ಯ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳಿರುತ್ತವೆ. ವ್ಯಾಪಾರಗಳು ಮುಂದಕ್ಕೆ ಸಾಗದೆ ಹತಾಶೆ ಹೆಚ್ಚಾಗುತ್ತದೆ ಮತ್ತು ಉದ್ಯೋಗಗಳಲ್ಲಿ ಅವಕಾಶಗಳು ಕೈ ಜಾರುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ: ಕೆಂಪು
ಕುಂಭ ರಾಶಿ
ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಸೇವೆಗಳಿಗೆ ತಕ್ಕ ಮನ್ನಣೆ ದೊರೆಯಲಿದೆ. ಮೌಲ್ಯಯುತವಾದ ವಸ್ತು ಲಾಭವನ್ನು ಪಡೆಯುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಮನೆಯಲ್ಲಿ ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಗಳಲ್ಲಿ ಸಮಸ್ಯೆಗಳು ಉದ್ಭವಿಸುತ್ತವೆ.
ಅದೃಷ್ಟದ ದಿಕ್ಕು: ವಾಯುವ್ಯ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಹಳದಿ
ಮೀನ ರಾಶಿ
ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳು ಇರುತ್ತವೆ. ಕುಟುಂಬ ಸದಸ್ಯರಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತದೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ಸಂಬಂಧಿಕರೊಂದಿಗೆ ವಾಗ್ವಾದಗಳಿರುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಉದ್ಯೋಗದಲ್ಲಿ ಕೆಲವು ವಿಷಯಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ಕಂದು