ಬೆಳಗಾವಿ: ಪಂಜಾಬ್ ಆಮ್ ಆದ್ಮಿ ಸರಕಾರ ರೈತರು ಬೆಳೆದ ಕಬ್ಬಿಗೆ ಪ್ರತಿ ಟನ್ ಗೆ 3,800 ರೂ. ನಿಗದಿ ಮಾಡಿದ್ದು ಸ್ವಾಗತಾರ್ಹ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಆಮ್ ಆದ್ಮಿಯ ಪಂಜಾಬ್ ಸರಕಾರ ರೈತರ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ಟನ್ ಕಬ್ಬಿಗೆ 3,800 ರೂ. ದರ ನಿಗದಿ ಮಾಡಿದ್ದು ಸ್ವಾಗತಾರ್ಹ. ಅದರಂತೆ ಕರ್ನಾಟಕ ರಾಜ್ಯ ಸರಕಾರವು ಸಹ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಮಾದರಿಯಲ್ಲಿಯೇ 3,800 ರೂ. ಪ್ರತಿ ಟನ್ ಕಬ್ಬಿಗೆ ದರ ನಿಗದಿ ಮಾಡಬೇಕು. ಇಲ್ಲದಿದ್ದಲ್ಲಿ ಆಮ್ ಆದ್ಮಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.