ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಪತನ

  • 14 Jan 2024 , 9:19 PM
  • Mahashtra
  • 104

ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು - ಸುಖೋಯ್ ಸು -30 ಮತ್ತು ಮಿರಾಜ್ 2000 - ತರಬೇತಿ ಅಭ್ಯಾಸದ ವೇಳೆ ಮಧ್ಯಪ್ರದೇಶದಲ್ಲಿ ಪತನಗೊಂಡಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Su-30 ಇಬ್ಬರು ಪೈಲಟ್‌ಗಳನ್ನು ಹೊಂದಿದ್ದರೆ, ಮಿರಾಜ್ 2000 ಒಬ್ಬ ಪೈಲಟ್ ಅನ್ನು ಹೊಂದಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.  ಇಬ್ಬರು ಪೈಲಟ್‌ಗಳು ಎಜೆಕ್ಟ್ ಮಾಡುವಲ್ಲಿ ಯಶಸ್ವಿಯಾದ ನಂತರ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ ಮತ್ತು ಮೂರನೇ ಪೈಲಟ್‌ಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಸುಖೋಯ್-30 ಮತ್ತು ಮಿರಾಜ್ 2000 ವಿಮಾನಗಳು ಮಧ್ಯಪ್ರದೇಶದ ಮೊರೆನಾ ಬಳಿ ಪತನ ಗೊಂಡಿವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ. 

ಭಾರತೀಯ ವಾಯುಪಡೆಯ ಎರಡು ವಿಮಾನಗಳು ಅಪಘಾತಕ್ಕೀಡಾಗಿರುವ ಬಗ್ಗೆ ವಾಯುಪಡೆಯ ಮುಖ್ಯಸ್ಥರು ರಕ್ಷಾ ಮಂತ್ರಿ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಿದರು.  ರಕ್ಷಾ ಮಂತ್ರಿ ಅವರು ಐಎಎಫ್ ಪೈಲಟ್‌ಗಳ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ ಮತ್ತು ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

Read All News