ನಿಪ್ಪಾಣಿ : ಇಂದಿನ ಸ್ಪರ್ಧಾತ್ಮಕ ಕಾಲದಲ್ಲಿ ಗುಣಮಟ್ಟದ ಶಿಕ್ಷಣ ಅತಿ ಅವಶ್ಯಕ ಎಂದು ಕೇಂದ್ರ ಸಚಿವ ನಿತಿನ ಗಡ್ಕರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ನಿಪ್ಲಾಣಿಯಲ್ಲಿ ಖಾಸಗಿ ಕಾಲೇಜು ಉದ್ಘಾಟಸಿ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಹೊಂದಲು ಕಾಲೇಜುಗಳ ಪಾತ್ರ ಬಹುಮುಖ್ಯವಾಗಿದ್ದು, ಭವಿಷ್ಯದ ನಾಯಕರನ್ನು ನಿರ್ಮಾಣ ಮಾಡಲು ವಿದ್ಯಾರ್ಥಿಗಳಿಗೆ ಉತ್ತಮ ಪರಿಸರದಲ್ಲಿ ಒಳ್ಳೆಯ ಶಿಕ್ಷಣ ನೀಡಿ ಎಂದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಶಶಿಕಲಾ ಜೊಲ್ಲೆ, ಗಣೇಶ್ ಹುಕ್ಕೇರಿ, ಎಂಎಲ್ಸಿ ಪ್ರಕಾಶ್ ಹುಕ್ಕೇರಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಇದ್ದರು.
ನಿಪ್ಪಾಣಿ ಪಟ್ಟಣದ ವಿ.ಎಸ್.ಎಂ ತಾಂತ್ರಿಕ ಕಾಲೇಜಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮ.
ಕಾರ್ಯಕ್ರಮ ವೇದಿಕೆಯಲ್ಲಿ ನಾಯಕರು ಖುಷಿ ಖುಷಿಯಾಗಿ ಮಾತಾಡುತ್ತಾ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ಮಾಡುತ್ತಿರುವದು ಕಂಡು ಬಂದಿತು.
ವರದಿ : ರಾಹುಲ್ ಮಾದರ