ಅಕಾಲಿಕ ಮಳೆಯಿಂದ ಸಾಸಿವೆ, ಚೆನ್ನಂಗಿ ಹಾನಿಯಾಗಿದ್ದು ರೈತರು ಕಣ್ಣೀರಲ್ಲಿ ಕೈ ತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೌದು,ಬೆಳಗಾವಿ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಜಮೀನಿನಲ್ಲಿ ಫಲವತ್ತತೆಯಿಂದ ಬೆಳೆದ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ.ಈಗಾಗಲೇ ಪ್ರವಾಹದಿಂದ ತತ್ತರಿಸಿದ ರೈತರಿಗೆ ಈಗ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿರುವುದು ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.