ಬೆಳಗಾವಿ : ಜಿಲ್ಲೆಯಾದ್ಯಂತ ಆಯುಧ ಪೂಜೆ ಹಾಗೂ ವಿಜಯ ದಶಮಿ ಹಬ್ಬದ ಸಂಭ್ರಮ ಎಲ್ಲಡೆ ಕಂಡು ಬಂದಿದ್ದು, ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ.
ನವರಾತ್ರಿ ಹಬ್ಬದ ಪ್ರಯುಕ್ತ ನಗರ ಸೇರಿದಂತೆ ಜಿಲ್ಲೆಯಾದ್ಯಂತೆ ನಾನಾ ಕಾರ್ಯಾಕ್ರಮಗಳನ್ನು ಆಯೋಜಿಸಲಾಗಿತ್ತು.
ಭೀಕರ ಬರಗಾಲದ ನಡುವೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು. ಕಬ್ಬು, ಚೆಂಡ ಹೂವು ವ್ಯಾಪಾರ ಭರ್ಜರಿಯಾಗಿತ್ತು.