ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆಗೆ ವಿಜಯೇಂದ್ರ ಸಂತಸ

  • shivaraj bandigi
  • 15 Jan 2024 , 2:14 PM
  • Bengaluru
  • 1263

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಜನವರಿ 22ರಂದು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ವಿಷಯ ಅತ್ಯಂತ ಖುಷಿಯನ್ನು ತಂದಿತ್ತಿದೆ. ಶ್ರೀರಾಮನಿಗೂ ಕರ್ನಾಟಕಕ್ಕೂ ವಿಶೇóಷವಾದ ಬಾಂಧವ್ಯವಿದೆ. ಹನುಮಂತನು ಕರ್ನಾಟಕದಲ್ಲೇ ಜನಿಸಿದ್ದು, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಅವರು ತಿಳಿಸಿದ್ದಾರೆ.

ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ತಿಳಿಸಿದ್ದಾರೆ

Read All News