ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗುತ್ತಿದ್ದು, ತಮ್ಮ ಗ್ರಾಮಕ್ಕೆ ಪದವಿಪೂರ್ವ ಕಾಲೇಜು ಮಂಜೂರು ಮಾಡಬೇಕೆಂದು ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಶೇಗುಣಶಿ ಅವರು ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕಾಧ್ಯಕ್ಷ ಮಾದೇವ ಮಡಿವಾಳ ಮಾತನಾಡಿ, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಪಟ್ಟಣಗಳಿಗೆ ಕಾಲೇಜುಗಳಿಗೆ ಹೋಗುತ್ತಾರೆ. ಅವರ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆ ಆಗುತ್ತಿದೆ. ಆದಷ್ಟು ಬೇಗ ಜನಪ್ರತಿನಿಧಿಗಳು ಈ ಸಮಸ್ಯೆಯ ಕುರಿತು ಪರಿಶೀಲಿಸಿ ಶೀಘ್ರವಾಗಿ ಹಲ್ಯಾಳ ಗ್ರಾಮಕ್ಕೆ ನೀಡಬೇಕೆಂದು ಆಗ್ರಹಿಸಿದರು.