ಬೆಳಗಾವಿ :ಜನಸಂಪರ್ಕ ಯಾತ್ರೆಯ ನಡುವೆಯೇ ದೆಹಲಿಗೆ ತೆರಳಿ ವರಿಷ್ಠರ ಜತೆಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಗೆ ಈ ಬಾರಿ ಸಚಿವ ಸಂಪುಟದಲ್ಲಿ ಸಿಹಿ ಸಿಗುತ್ತದೆಯಾ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ನಿಮಗೆ ತಿಳಿಯುತ್ತದೆ ಕಾಯಿರಿ ಎಂದರು.
ಮಹಾರಾಷ್ಟ್ರದಲ್ಲಿ ಈಗಾಗಲೇ ಕನ್ನಡ ಸಂಬಂದಿಸಿದಂತೆ ಭವನಗಳು ಇವೆ. ಕನೇರಿಮಠದಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದು ಹೊಸತೇನಲ್ಲ. ಈ ವಿಚಾರದಲ್ಲಿ ರಾಜ್ಯ ಮತ್ತು ಭಾಷೆ ಅಡಚಣೆಯಾಗಬಾರದು ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಯಿಸಿದರು.
ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಆಚರಣೆ ಮಾಡುತ್ತಿರುವುದು ಸಂತೋಷವಾಗಿದೆ. ಅವರ ಸುಧೀರ್ಘವಾದ ನಾಲ್ಕು ದಶಕಗಳಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ, ಸಕ್ಕರೆ ಕಾರ್ಖಾನೆ ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿ ಜನರಿಗೆ ಸಹಾಯ ಮಾಡಿ ಜನಪ್ರೀಯರಾಗಿದ್ದಾರೆ ಮತ್ತು ನಿರಂತರವಾಗಿ ಕೆಲಸ ಮಾಡುವ ಶಕ್ತಿ ಅವರಲ್ಲಿದೆ. ಸ್ನೇಹ ಜೀವಿ ಎಂದರು.