ದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಅಂಬಾನಿ, ಅದಾನಿ ಬಗ್ಗೆ ಉತ್ತರಿಸಲು ಸಾಧ್ಯವಿಲ್ಲ ಹೀಗಾಗಿಯೇ ಬಹಿರಂಗ ಚರ್ಚೆಗೆ ಬರುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ಆಪ್ತ ಉದ್ಯಮಿಗಳ ಬಗ್ಗೆ ಮತ್ತು ಚುನಾವಣಾ ಬಾಂಡ್ಗಳನ್ನು ಹೇಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದ ಕಾರಣ ಮೋದಿ ಚರ್ಚೆಗೆ ಬರುತ್ತಿಲ್ಲ. ನರೇಂದ್ರ ಮೋದಿ ಅವರು ಎಲ್ಲಿ ಬೇಕಾದರೂ ನನ್ನೊಂದಿಗೆ ಚರ್ಚೆ ನಡೆಸಬಹುದು. ಆದರೆ ಅವರೇ ನನ್ನೊಂದಿಗೆ ಚರ್ಚಿಸಲು ಬರುತ್ತಿಲ್ಲ ಎಂದಿದ್ದಾರೆ.