ಅನ್ನಭಾಗ್ಯ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ನೀಡುತ್ತಿದ್ದೇವೆ : ಸಿದ್ದರಾಮಯ್ಯ

  • Krishna Shinde
  • 14 Jan 2024 , 5:08 AM
  • Bengaluru
  • 207

ಬೆಂಗಳೂರು :ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯಕ್ಕೆ ಅಕ್ಕಿ ಕೊರತೆ ಬಂದಿದ್ದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಕೊಟ್ಟ ಮಾತಿನಂತೆ ಒಂದು ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ,ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು ಎಂದು ಹೇಳಿದ ಸಿಎಂ ನಮಗೆ 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ ಮತ್ತು ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ.ಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ ಇದು ಕೇಂದ್ರ ಬಿಜೆಪಿ  ಸರ್ಕಾರದ ಷಡ್ಯಂತ್ರ ಎಂದು ಸಿಎಂ ಹೇಳಿದ್ದಾರೆ.

ನವದೆಹಲಿಗೆ ಭೇಟಿ ನೀಡಿದಾಗ ಎಫ್.ಸಿ.ಐ ನವರು ಅಕ್ಕಿ ನೀಡಲು ನಿರಾಕರಿಸಿರುವ ವಿಚಾರವನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇಂದ್ರದಿಂದ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗಿದೆ.
ಹಾಗಾದರೆ ಅನ್ನಭಾಗ್ಯವನ್ನು ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ? ಎಂದು ಸಿಎಂ  ಪ್ರಶ್ನೆ ಮಾಡಿದ್ದಾರೆ.

Read All News