ಡಿ.19 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

  • 15 Jan 2024 , 12:18 AM
  • Bengaluru
  • 166

ಬೆಂಗಳೂರು : ಡಿಸೆಂಬರ್ 19 ರಿಂದ 29ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಕರೆಯಲಾದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ ಬಳಿಕ‌ ಪತ್ರಕರ್ತರಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.‌ ಕೆ.ಸುಧಾಕರ, ಈ ಬಾರಿ ಬೆಳಗಾವಿಯಲ್ಲಿ 10 ದಿನಗಳ ಕಾಲ‌ ಚಳಿಗಾಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಈ ಬಾರಿ ಯಾವುದೇ ಗೊಂದಲ ಉಂಟಾಗದಂತೆ ಅಧಿವೇಶನ ನಡೆಸಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧಾರವಾಡದಲ್ಲಿ‌ ತಿಳಿಸಿದ್ದಾರೆ.

Read All News