ಕೆಎಲ್ಇ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ

ಬೈಲಹೊಂಗಲ : ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ತೋರಿಸಬೇಕೆಂದು ಮುನವಳ್ಳಿಯ ರೇಣಿಕಾ ಸುಗರ್ಸ್ ಸಿಬಿಎಸ್ಸಿ ಶಾಲೆಯ ಪ್ರಾಚಾರ್ಯೆ ಲಲಿತಾ ಚಾರಿ ಹೇಳಿದರು. 

promotions

ಅವರು ಪಟ್ಟಣದ ಪ ಕೆ ಎಲ್ ಇ ಪಿ ಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಇದೇ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಬೇರೆಡೆಗೆ ಹೊರಡುವ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಬೀಳ್ಕೊಡುವದೇ ವಾರ್ಷಿಕ ಸ್ನೇಹ ಸಮ್ಮೇಳನವಾಗಿದೆ ಎಂದರು. ಕೆಎಲ್ಇ ಉಪಾಧ್ಯಕ್ಷ ಬಿ. ಎಸ್. ತಟವಾಟಿ ಅಧ್ಯಕ್ಷತೆ ವಹಿಸಿದ್ದರು. ಕೆಆರ್ ಸಿಇ ಆಂಗ್ಲ ಮಾಧ್ಯಮ ಶಾಲೆಯ ಉಪಪ್ರಾಚಾರ್ಯ ಎಂ.ಎನ್.ಕುಲಕರ್ಣಿ ಮಾತನಾಡಿದರು. ವೇದಿಕೆಯ ಮೇಲೆ ನಿವೃತ್ತ ಪ್ರಾಧ್ಯಾಪಕ ಎಸ್. ಎಸ್. ಅಬ್ಬಾಯಿ, ಕೆಎಲ್ಇ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಶ್ರೀಧರ ನಿರಡಿ, ಪಿಯು ಕಾಲೇಜಿನ ಪ್ರಾಚಾರ್ಯ ಎಸ್. ಬಿ. ತಟವಾಟಿ ಇದ್ದರು. 

promotions

 ಪ್ರೋ. ಎಸ್. ಎಮ್. ರೊಟ್ಟಿ ಸ್ವಾಗತಿಸಿ, ನಿರೂಪಿಸಿದರು . ಪ್ರೋ ವಿ ಜಂಗಯ್ಯ ವಂದಿಸಿದರು. 

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.

ವರದಿ  : ರವಿಕಿರಣ್  ಯಾತಗೇರಿ 

Read More Articles