ಸಭೆಯಲ್ಲಿ ರಾಜ್ಯ ಅಧ್ಯಕ್ಷ ಕಲಬುರ್ಗಿ ಆಗಮನ, ಮುಸ್ಲಿಂ ಮೀಸಲಾತಿ ಮರು ಸ್ಥಾಪಿಸಲು ಒತ್ತಾಯಿಸಿ ಕೊಪ್ಪಳದಲ್ಲಿನಾಳೆ ಬೃಹತ್ ಸಭೆ
- shivaraj B
- 10 Sep 2024 , 10:12 AM
- Koppal
- 129
ಕೊಪ್ಪಳ: 2 ಬಿ ಮೀಸಲು ಶೇಕಡ 4 ರಿಂದ 8 ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಆಗ್ರಪಡಿಸಲು ಹಾಗೂ ಮುಸ್ಲಿಂ ಮೀಸಲಾತಿ ಮರು ಸ್ಥಾಪಿಸಲು ಒತ್ತಾಯಿಸಲು ಕರ್ನಾಟಕ ಮುಸ್ಲಿಂ ಯುನಿಟಿ ಏರ್ಪಡಿಸಲಿರುವ ಬೆಂಗಳೂರು ಚಲೋ ಕಾರ್ಯಕ್ರಮ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲು ಸೆ.11 ರ ಬುಧವಾರ ಬೆಳಿಗ್ಗೆ 11:30 ಗಂಟೆಗೆ ನಗರದ ಹಜರತ್ ಮರ್ದ್ದಾನೆ ಗೈಬ್ ದರ್ಗಾ ಆವರಣದಲ್ಲಿ ಮುಸ್ಲಿಂ ಸಮುದಾಯದ ಪೂರ್ವಭಾವಿ ಸಿದ್ಧತಾ ಸಭೆ ಜರುಗಲಿದೆ ಎಂದು ಕರ್ನಾಟಕ ಮುಸ್ಲಿಂ ಯುನಿಟಿ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಮೊಹಮ್ಮದ್ ಜೀಲಾನ ಕಿಲ್ಲೇದಾರ್ ಮೈಲೈಕ್ ತಿಳಿಸಿದರು.
ಅವರು ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸದರಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಚರ್ಚಿಸಲು ನಮ್ಮ ಕರ್ನಾಟಕ ಮುಸ್ಲಿಂ ಯುನಿಟಿಯ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಕಲಬುರ್ಗಿಯವರು ಆಗಮಿಸಲಿದ್ದಾರೆ ಎಂದು ಹೇಳಿದರು.
ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ ವಿಜಯಪುರದಿಂದ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ ಕೊಪ್ಪಳ ಜಿಲ್ಲೆಯಿಂದ ಹೆಚ್ಚಿನ ಜನ ಮುಸ್ಲಿಂ ಸಮುದಾಯದ ಪ್ರಮುಖರು ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಾರ್ಯಕರ್ಮದ ರೂಪರೇಶ ಸಿದ್ಧಗೊಳಿಸಲು ಚರ್ಚಿಸಲು ಪೂರ್ವಭಾವಿ ಸಿದ್ದತಾ ಸಭೆ ಸೆ.11 ರ ಬೆಳಗ್ಗೆ 11:30 ಗಂಟೆಗೆ ಕೊಪ್ಪಳ ದ ಹಾಜರತ್ ಮರ್ದಾನೆ ಗೈಬ್ ದರ್ಗಾ ಆವರಣ ದಲ್ಲಿ ಜರುಗಲಿದೆ, ಸಮಾಜದ ಹಕ್ಕುಗಳಿಗೆ ಹೋರಾಟ ಮಾಡುವ ಅನಿವಾರ್ಯತೆ ಬಂದಿದೆ ಶಿಕ್ಷಣ ಉದ್ಯೋಗಗಳಲ್ಲಿ ಹಿಂದುಳಿದ ಮುಸ್ಲಿಂ ಸಮುದಾಯವನ್ನು ಅಭಿವೃದ್ಧಿ ಪಥಕ್ಕೆ ತರುವ ಉದ್ದೇಶದಿಂದ ಸರ್ಕಾರಕ್ಕೆ ಒತ್ತಾಯಿಸಲು ಮತ್ತು ಮನವರಿಕೆ ಮಾಡಲು ವಿವಿಧ ಹೋರಾಟಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಚರ್ಚಿಸಿ ಅಗತ್ಯ ಕ್ರಮ ಮತ್ತು ನಿರ್ಣಯಗಳನ್ನು ಕೈಗೊಳ್ಳಲು ಈ ಮಹತ್ವದ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಕರ್ನಾಟಕ ಮುಸ್ಲಿಂ ಯುನಿಟಿ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಮೊಹಮ್ಮದ್ ಜಿಲಾನ ಕಿಲ್ಲೆದಾರ್ ವಿವರಿಸಿದರು
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸಿರಾಜ್ ಮನಿಯರ್ ತಾಲೂಕ ಅಧ್ಯಕ್ಷ ಫಕ್ರು ಸಾಬ್ ನದಾಫ್ ತಾಲೂಕ ಉಪಾಧ್ಯಕ್ಷ ಇಬ್ರಾಹಿಂ ಪಟೇಲ್ ತಾಲೂಕ ಕಾರ್ಯದರ್ಶಿ ಹಾಜರತ್ ಅಲಿ ಜಿಲ್ಲಾ ಕಾರ್ಯದರ್ಶಿ ಸಿಎಂ ಮುಸ್ತಫಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ವರದಿ : ರವಿಚಂದ್ರ ಬಡಿಗೇರ