ಬೆಳಗಾವಿಯ ಕೀರ್ತಿ ಪತಾಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ ಕ್ರೀಡಾಪಟುಗಳು
- shivaraj B
- 27 Jul 2024 , 3:27 PM
- Belagavi
- 7601
ಬೆಳಗಾವಿ : ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ದೇಶದ ಕೀರ್ತಿ ಹೆಚ್ಚಿಸಿರುವ ಆಟಗಾರರು, ಶ್ರೀಲಂಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸಿಟ್ಟಿಂಗ್ ಪ್ಯಾರಾ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಶ್ರೀಲಂಕಾ ಎದುರು ಭಾರತದ ತಂಡ ಭರ್ಜರಿ ಗೆಲುವು ದಾಖಲಿಸಿದೆ.
ಈ ತಂಡದಲ್ಲಿ ಬೆಳಗಾವಿಯ ಏಳು ಕ್ರೀಡಾಪಟುಗಳು ಇದ್ದು ಬೆಳಗಾವಿಗೆ ಕೀರ್ತಿ ತಂದಿದ್ದಾರೆ. ಶ್ರೀಲಂಕಾ ಸಹಯೋಗದಲ್ಲಿ ಆಯೋಜಿಸಿರುವ ಚಾಂಪಿಯನ್ ಶಿಪ್ನಲ್ಲಿ ಭಾರತ, ಶ್ರೀಲಂಕಾ, ಥಾಯ್ಲೆಂಡ್, ನೇಪಾಳ ಸೇರಿ ಇನ್ನಿತರ ದೇಶಗಳ ತಂಡಗಳು ಭಾಗವಹಿಸಿದ್ದವು.
ಪುರುಷರ ತಂಡದಲ್ಲಿ ಬೆಳಗಾವಿ ಜಿಲ್ಲೆಯ ಮಹಾಂತೇಶ ಹೊಂಗಲ, ಸೂರಜ್ ಧಾಮನೇಕರ್, ಸುರೇಶ ಕುಂಬಾರ, ಈರಣ್ಣ ಹೊಂಡಪ್ಪನವರ, ಮನಸೂರ್ ಮುಲ್ಲಾ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಫೈನಲ್ ನಲ್ಲಿ ಭಾರತ ತಂಡಕ್ಕೆ ಕಪ್ ಗೆಲ್ಲಿಸಿಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಮಹಿಳೆಯರ ತಂಡದಲ್ಲಿ ಮನಿಷಾ ಪಾಟೀಲ, ಭಾಗ್ಯಶ್ರೀ ಮಳಲಿ ಅತ್ಯುತ್ತಮ ಆಟ ಪ್ರದರ್ಶನ ಮಾಡಿ ಬೆಳಗಾವಿಯ ಕೀರ್ತಿ ಪತಾಕೆಯನ್ನು ಶ್ರೀಲಂಕಾದಲ್ಲಿ ಮೊಳಗಿಸಿದ್ದು ಇತಿಹಾಸದ ಪುಟ ಸೇರಿದೆ.
ಇದೇ ತಂಡ ಕಳೆದ 2023ರಲ್ಲಿ ಛತ್ತಿಸಗಡದಲ್ಲಿ ನಡೆದ 7ನೇ ರಾಷ್ಟ್ರೀಯ ಮಟ್ಟದ ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತ ತಂಡದಲ್ಲಿ ಇವರೆಲ್ಲಾ ಆಡಿದ್ದರು. ಪುಣೆಯಲ್ಲಿ 2023ರ ಸೆಪ್ಟೆಂಬರ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ರಗ್ಬಿ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ, 2024 ಜನವರಿಯಲ್ಲಿ ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಪರ್ಪಪ್ ಫೆಸ್ಟ್ನಲ್ಲಿ ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು. ಈಗ ಶ್ರೀಲಂಕಾದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಥ್ರೋಬಾಲ್ ಚಾಂಪಿಯನ್ ಶಿಪ್ನಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಸರಕಾರದ ಯಾವುದೇ ಸಹಾಯ ಇಲ್ಲದೆ, ವಿಶೇಷ ಚೇತನ ಕ್ರೀಡಾಪಟುಗಳಿಗೆ ಸುರೇಶ ಯಾದವ್ ಫೌಂಡೇಶನ್, ಫೇಸ್ ಬುಕ್ ಫೇಂಡ್ರ್ ಸರ್ಕಲ್, ಸಮರ್ಥನಂ ಅಂಗವಿಕಲ ಸಂಸ್ಥೆ ಹಾಗೂ ಇಂಡಾಲ್ ಕೋ ಲಿಮಿಟೆಡ್ ಆರ್ಥಿಕ ಸಹಾಯ ಮಾಡಿ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ.