ಹಿರಿಯ ಸಾಹಿತಿ ಗವಿಮಠರಿಗೆ ಪ್ರಶಸ್ತಿ: ಹುಕ್ಕೇರಿ ಶ್ರೀ ಅಭಿನಂದನೆ

ಬೆಳಗಾವಿ :

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರವು ನೀಡುವ ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಿನಲ್ಲಿ

ನೀಡುವ ಪ್ರಶಸ್ತಿಯನ್ನು ಬೆಳಗಾವಿಯ ಹಿರಿಯ ರಂಗಕರ್ಮಿ,ಸಾಹಿತಿ ಶ್ರೀ ಬಿ ಎಸ್ ಗವಿಮಠ ಅವರಿಗೆ ನೀಡಿರುವುದು ಅಭಿಮಾನದ ಸಂಗತಿ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಹಿರಿಯ ಸಾಹಿತಿ ಬಿ.ಎಸ್‌.ಗವಿಮಠ ಅವರು ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಅವರಿಗೆ ಪ್ರಶಸ್ತಿ ದೊರಕಿರುವುದು ಗಡಿನಾಡ ಬೆಳಗಾವಿ ಕನ್ನಡಿಗರಿಗೆ ಸಂತಸ ತಂದಿದೆ ಎಂದು ಶ್ರೀಗಳು ತಿಳಿಸಿದ್ದಾರೆ.

Read More Articles