ಬಿಜೆಪಿ ವಿರುದ್ಧ ಹರಿಹಾಯ್ದರು ಬಂಗಾರಪ್ಪ
- shivaraj bandigi
- 14 Jan 2024 , 11:34 PM
- Belagavi
- 495
ಬೆಳಗಾವಿ :

ಬೆಳಗಾವಿಯಲ್ಲಿ ಬಿಜೆಪಿಯವರು ಉತ್ತರ ಕರ್ನಾಟಕ ಸಮಸ್ಯೆಯ ಬಗ್ಗೆ ಚರ್ಚೆ ಮಾಡುವ ಬದಲು ಪಬ್ಲಿಸಿಟಿಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕದ ಸಮಸ್ಯೆಯ ಚರ್ಚೆಗೆ ಉತ್ತರ ಕೊಡಲು ಸರಕಾರ ಸಿದ್ಧವಿದೆ. ಆದರೆ ಚರ್ಚೆ ಮಾಡಬೇಕಿದ್ದ ಬಿಜೆಪಿ ಪಬ್ಲಿಸಿಟಿ ಸಲುವಾಗಿ ಬೆಳಗಾವಿ ಅಧಿವೇಶನವನ್ನು ಬಿಜೆಪಿಯವರು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದರು.
ಬಿಜೆಪಿಯವರು ಇದೇ ರೀತಿ ಜನರ ಸಮಸ್ಯೆ ಚರ್ಚೆ ಮಾಡುವ ಬದಲು ಪಬ್ಲಿಸಿಟಿ ಸಲುವಾಗಿ ರಾಜಕೀಯ ಮಾಡುತ್ತಿದ್ದರೆ ಮತ್ತೇ ರಾಜ್ಯದ ಜನ ಅವರನ್ನು ವಿರೋಧ ಪಕ್ಷದಲ್ಲಿ ಕುಳಿಸುತ್ತಾರೆ. ಸರಕಾರ ರಾಜ್ಯದ ಸಮಸ್ಯೆಯ ಬಗ್ಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಪರಿಹರಿಸುವ ಕೆಲಸ ಮಾಡುತ್ತಿದ್ದೆ ಎಂದರು.
ಗಡಿ ಭಾಗದ ಶಾಲೆಯಲ್ಲಿ ಶಿಕ್ಷಕರ ಕೊರತೆಯ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದೆ. ಗಡಿ ಭಾಗದ ಶಾಲೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಸಮಸ್ಯೆ ಎದುರಾಗದು ಎಂದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರಕಾರದ ಬಯಕೆ ಇದೆ. ಈ ನಿಟ್ಟಿನಲ್ಲಿ ಸರಕಾರ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಕೊರತೆಯಾಗಲು ಸರಕಾರ ಬಿಡುವುದಿಲ್ಲ ಎಂದರು.










