ಸಾಂಗಲಿ ಜಿಲ್ಲೆಯಲ್ಲಿ ಭರ್ಜರಿ ಜಯದೊಂದಿಗೆ ಬಿಜೆಪಿ ಮೇಲುಗೈ-ಅಭಯ ಪಾಟೀಲ್

ಬೆಳಗಾವಿ:ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಸಾಂಗಲಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಬಿಜೆಪಿ, ನಾಲ್ಕು ಪ್ರಮುಖ ಕ್ಷೇತ್ರಗಳಲ್ಲಿ ಜಯಭೇರಿ ಮೆರೆದಿದೆ.

promotions

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಈ ಚುನಾವಣೆಯಲ್ಲಿ ಪ್ರಮುಖ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದು, ಈ ಜಯಕ್ಕೆ ಪ್ರಮುಖ ಕಾರಣವೆನಿಸಿದ್ದಾರೆ. 

promotions

ಬೆಳಗಾವಿಯಲ್ಲಿ ಮಾತನಾಡಿದ ಅವರು,ಕಳೆದ ಒಂದು ತಿಂಗಳಿನಿಂದ ಈ ಗೆಲುವಿಗಾಗಿ ನಾವು ತೀವ್ರ ಶ್ರಮಿಸಿದ್ದೇವೆ. ಜನರ ಬೆಂಬಲ ಮತ್ತು ಕಾರ್ಯಕರ್ತರ ಪರಿಶ್ರಮವೇ ಈ ಯಶಸ್ಸಿನ ಮೂಲವಾಗಿದೆ ಎಂದು ಅಭಿಪ್ರಾಯಪಟ್ಟರು.

promotions

ಈ ಫಲಿತಾಂಶ ಬಿಜೆಪಿ ಪಕ್ಷಕ್ಕೆ ಮಹಾರಾಷ್ಟ್ರದಲ್ಲಿ ತನ್ನ ಬಲವರ್ಧನೆಗಾಗಿ ಮಹತ್ವದ ಹೆಜ್ಜೆಯಾಗಿದೆ. ಇದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹವನ್ನು ತುಂಬುವುದರೊಂದಿಗೆ, ರಾಜ್ಯದ ರಾಜಕೀಯ ಸಮೀಕರಣದಲ್ಲಿ ಬದಲಾವಣೆಗೆ ದಾರಿ ಮಾಡಿಕೊಟ್ಟಿದೆ.

Read More Articles