ರೈತರ ನಡುವೆಯೂ ವಿಷ ಬೀಜ ಬಿತ್ತಿದ ಬಿಜೆಪಿ: ಮಧು ಬಂಗಾರಪ್ಪ
- 15 Jan 2024 , 12:06 AM
- Belagavi
- 149
ಬೆಳಗಾವಿ :ರಾಜ್ಯದಲ್ಲಿ ಹಿಂದೂಳಿದ ವರ್ಗಗಗಳ ಜಿಲ್ಲಾ ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸಿದ್ದು, ಜನವರಿ ತಿಂಗಳಲ್ಲಿ ಮಾಡಲು ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

ಮಂಗಳವಾರ ಕಾಂಗ್ರೆಸ್ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲಾಮಟ್ಟದ ಸಮಾವೇಶ ಮಾಡಿದ ಬಳಿಕ ರಾಜ್ಯಮಟ್ಟದ ಸಮಾವೇಶ ನಡೆಸಲು ಯೋಜನೆ ರೂಪಿಸಲಾಗಿದೆ. ಬಂಗಾರಪ್ಪನವರು ಕಾಂಗ್ರೆಸ್ ಪಕ್ಷದಿಂದ ಹೊರ ಹೊದ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಯಾಗಿರುವುದು ಕಂಡು ಬಂದಿದೆ. ಈ ಭಾಗದಲ್ಲಿ ಪಕ್ಷ ಸಂಘಟನೆ ಮಾಡುವ ಗುರಿಯನ್ನು ಪಕ್ಷದ ವರಿಷ್ಠರು ನನಗೆ ಜವಾಬ್ದಾರಿ ನೀಡಿದ್ದಾರೆ ಎಂದರು.

ಬಿಜೆಪಿಯವರು ಜಾತಿ, ಜಾತಿಗಳ ನಡುವೆ ವಿಷ ಬೀಜ ಬಿತ್ತುವುದರ ಜೊತೆ ಜೊತೆಗೆ ರೈತರ ನಡುವೆಯೂ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಒಂದು ಭಾಗದಲ್ಲಿ ಭತ್ತ ಬೆಳೆಯುವ ರೈತರಿಗೆ 500 ರೂ. ಪರಿಹಾರ ಧನ ನೀಡುತ್ತಾರೆ. ಆದರೆ ಒಂದು ಭಾಗದ ರೈತರಿಗೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಈ ಕುರಿತು ಸಿದ್ಧರಾಮಯ್ಯನವರ ಗಮನಕ್ಕೆ ತಂದ ಕೂಡಲೇ ಅವರು ಬೆಳಗಾವಿಯ ಚಳಿಗಾಯಲದ ಅಧಿವೇಶನದಲ್ಲಿ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ ಎಂದರು.
ಶಾಸಕರಾದ ಗಣೇಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಸುನೀಲ ಹನುಮಣ್ಣವರ, ಲಕ್ಷ್ಮಣ ರಾವ್ ಚಿಂಗಳೆ, ವಿನಯ ನಾವಲಗಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










