ಬಿಜೆಪಿಗೆ ಬೆಳಗಾವಿ ಲೋಕಸಭಾ ಆಯ್ಕೆಯ ಚಿಂತೆ

ಬೆಳಗಾವಿ

promotions

ಬೆಳಗಾವಿ ಲೋಕಸಭಾ ಚುನಾವಣೆಯ ಕಾವು ಕಾಂಗ್ರೆಸ್ ನಲ್ಲಿ ಚುರುಕು ಮೂಡಿದ್ದರೆ, ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ಮತ್ತೇ ಮಂಗನ ಬಾಲದಂತೆ ಬೆಳೆಯುತ್ತಿರುವುದು ಬಿಜೆಪಿ ವರಿಷ್ಠರಿಗೆ ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ಕಗ್ಗಂಟಾಗಿ ಉಳಿದಿದೆ.

promotions

ಹೌದು ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆಯ ಕಾವು ಗರಿಗೇದರಿದೆ. ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿ ನಡೆದಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರ ಮನ್ನಣೆ ಗಳಿಸಿದೆ.

ಇತ್ತ ಬೆಳಗಾವಿ ಲೋಕಸಭಾ ‌ಚುನಾವಣೆಯಲ್ಲಿ ಬಿಜೆಪಿಯಿಂದ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ತಪ್ಪುತ್ತದೆ ಎಂದು ಬಿಜೆಪಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಬೆಳೆಯುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಹಾಲಿ ಸಂಸದೆ ಮಂಗಳಾ ಅಂಗಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ವಿಧಾನ ಪರಿಷತ್ ‌ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಹಾಂತ ಒಕ್ಕುಂದ, ಶಂಕರಗೌಡ ಪಾಟೀಲ, ಸಂಜಯ ಪಾಟೀಲ ಹೀಗೆ ನೂರಾರು ಆಕಾಂಕ್ಷಿಗಳ ಪಟ್ಟಿಯೇ ಇದೆ ಹೈಕಮಾಂಡ್ ಯಾರಿಗೆ ಮನ್ನಣೆ ನೀಡುತ್ತದೆ ಕಾದು ನೋಡಬೇಕು.

Read More Articles