ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಬಿಜೆಪಿ ಬೆಳಗಾವಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಸೆ.17ರಿಂದ ಅಕ್ಟೋಬರ್2 ರವರೆಗೆ ‘ಸೇವಾ ಪಾಕ್ಷಿಕ’ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ಹೇಳಿದರು.

promotions

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಗಳ ಹುಟ್ಟುಹಬ್ಬವು ಸೆ.17ರಂದು ಇರುವುದರಿಂದ ಅಂದು ನಾವೆಲ್ಲರು ಸೇವಾ ಪಾಕ್ಷಿಕ ಅಡಿಯಲ್ಲಿ 15 ದಿನಗಳ ಕಾಲ ಅನೇಕ ಸೇವಾ ಚಟುವಟಿಕೆಗಳನ್ನು ನಡೆಸಿ ಅವುಗಳ ಮೂಲಕ ಪ್ರಧಾನಿಗಳ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸಲಾಗುವುದು ಎಂದರು.

promotions

ಪ್ರಧಾನ ಮಂತ್ರಿಗಳ ಜೀವನ ಮತ್ತು ಗುರಿಯ ಕುರಿತು ಒಂದು ಪ್ರದರ್ಶಿನಿಯನ್ನು ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಪ್ರಧಾನಿಗಳ ಜನ ಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕಗಳನ್ನು ಮುದ್ರಿಸಿ ಪ್ರದರ್ಶಿಸಲಾಗುವುದು. ಯುವ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದರು.

Read More Articles