ಬಿ.ವೈ ವಿಜಯೇಂದ್ರಗೆ ಒಲಿದ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ :ಹುಕ್ಕೇರೀಶರ ಶುಭಾಶೀರ್ವಾದ
- Shivaraj Bandigi
- 15 Jan 2024 , 1:56 AM
- Bengaluru
- 516
ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ. ಶಿಕಾರಿಪುರ ಶಾಸಕ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ

ಮೊನ್ನೆ ಅಷ್ಟೇ ನಡೆದ ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಆಗಮಿಸಿದ್ದ ಬಿ.ವೈ ವಿಜಯೇಂದ್ರ ಅವರಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವದಿಸಿ ಮಾತನಾಡುವಾಗ ಬಿ.ವೈ ವಿಜಯೇಂದ್ರ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಕ್ಕೇರಿ ಹಿರೇಮಠಕ್ಕೆ ಬರುವಂತಾಗಲಿ ಎಂದು ಆಶೀರ್ವದಿಸಿದ್ದರು .
ಸದ್ಯ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಶುಭ ಹಾರೈಸಿದ್ದಾರೆ











