ಕೇಂದ್ರ ಬಜೆಟ್ ರಾಜ್ಯಕ್ಕೆ ಅನ್ಯಾಯ : ಸಂಸದ ಹಿಟ್ನಾಳ

ಕೊಪ್ಪಳಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ‌.

promotions

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ‌. ಅದರಲ್ಲೂ ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿಸುತ್ತಿದ್ದರೂ 

promotions

ಕರ್ನಾಟಕಕ್ಕೆ ಏನೇನು ಒತ್ತು ಕೊಟ್ಟಿಲ್ಲ, ಐದು ಜನ ಸಚಿವರು ಇದ್ದರೂ ಕೈಗಾರಿಕಾ, ರೈಲ್ವೆ ಸೇರಿದಂತೆ ಇತರೆ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ. ಇದು ನಿರಾಶಾದಾಯಕ, ಜನವಿರೋಧಿ ಬಜೆಟ್ ಇದಾಗಿದ್ದು, ಬಡವರಿಗೆ ಅನ್ಯಾಯ ಮಾಡಿದ್ದಾರೆ. ರಾಯಚೂರಿಗೆ ಏಮ್ಸ್ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದೇವು. ಅದನ್ನು ಕೊಟ್ಟಿಲ್ಲ ಎಂದರು.

ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ.

ಈ ಬಜೆಟ್‌ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದು, ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯಿದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್‌ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆ ವಿತ್ತ ಸಚಿವರು ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದ್ದಾರೆ. ಇದೊಂದು ರೈತ ವಿರೋಧಿ, ಜನ ವಿರೋಧಿ ಬಜೆಟ್ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ರವಿಚಂದ್ರ  ಬಿ  ಬಡಿಗೇರ್ 

Read More Articles