ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ

 ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಪರ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಬ್ಬರದ ಪ್ರಚಾರ ಮಾಡಿದ್ದರು. ಇವರಿಬ್ಬರ ಪ್ರಚಾರ ಸುಮಲತಾ ಅಂಬರೀಶ್ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು. ಅದರಂತೆ ಈ ಬಾರಿ ಸುಮಲತಾ ಅವರು ಬಿಜೆಪಿ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್‌ಗೆ ಬೆಂಬಲ ಮಾಡಿದ್ದಾರೆ. ಇದೀಗ ದರ್ಶನ್ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧವಾಗಿ ಮಂಡ್ಯದಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಗುರುವಾರ ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ಮಾಡಲಿದ್ದಾರೆ.

promotions

promotions

Read More Articles