ಮುಖ್ಯಮಂತ್ರಿ ಬದಲಾವಣೆ! ವೀರಶೈವ ಲಿಂಗಾಯತರಿಗೆ ಆದ್ಯತೆ ಕೊಡಿ, ಶ್ರೀಶೈಲ ಜಗದ್ಗುರು ಆಗ್ರಹ

ಚಿಕ್ಕೋಡಿ :  ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡುವದಾದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕೆಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮಿಜಿ. 

promotions

ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಆಗ್ರಹಿಸಿದರು. ನಿನ್ನೆ ಚಂದ್ರಶೇಖರ ಸ್ವಾಮೀಜಿ ಡಿ.ಕೆ ಶಿವಕುಮಾರಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ ಬೆನ್ನಲ್ಲೆ ಸ್ವಾಮೀಜಿಗಳ ಮೂಲಕವೇ ಲಿಂಗಾಯತ ಮುಖ್ಯಮಂತ್ರಿಗೆ ಆಗ್ರಹಿಸಿರುವದು ಸರ್ಕಾರಕ್ಕೆ ಮುಜುಗರವಾಗಿದ್ದು ಮಾತ್ರ ಸತ್ಯ. 

promotions

ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ.

ಎಮ್.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು,

ಕಾಶಿ, ಉಜ್ಜಯಿನಿ, ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ. ಒಂದು ವೇಳೆ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಂಡಂಬಡಕೆ ಆಗಿದ್ದರೆ ಒಡಂಬಡಿಕೆಯ ಪ್ರಕಾರ ನಡೆದುಕೊಳ್ಳಲಿ ಎಂದರು.

Read More Articles