ಗಣ್ಯರ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೆರಿಸಿದ ಸಿಎಂ

ಬೆಳಗಾವಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

promotions

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

promotions

Read More Articles