ಅರ್ಧ ಶತಮಾನ ಪೂರೈಸಿದ ಸಂಸ್ಥೆಗೆ ಅಭಿನಂದನೆ : ಸತೀಶ ಜಾರಕಿಹೊಳಿ
- shivaraj bandigi
- 4 Feb 2024 , 10:16 PM
- Belagavi
- 480
ಬೈಲಹೊಂಗಲ: ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವೆ ತೀವೃ ಪೈಪೋಟಿ ಇರುವ ಇಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ನಡೆಸಿಕೊಂಡು ಹೋಗುವುದು ಬಹಳ ಕಷ್ಟದ ಕೆಲಸವಾಗಿದ ಎಂದು ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ ಹೇಳಿದರು.

ಅವರು ರವಿವಾರ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಈಶಪ್ರಭು ಶಿಕ್ಷಣ ಸಂಸ್ಥೆ 50ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ, ಮಾತನಾಡಿ, ಕಳೆದ 50 ವರ್ಷಗಳಿಂದ ಬೆಳವಡಿ ಭಾಗದಲ್ಲಿ ಉತ್ತಮ ಶಿಕ್ಷಣವನ್ನು ಪ್ರಸಾರ ಮಾಡುತ್ತಿರುವ ಈಶಪ್ರಭು ಶಿಕ್ಷಣ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕೆ ಎಲ್ ಇ ಕಾರ್ಯಾದ್ಯಕ್ಷ ಡಾ ಪ್ರಭಾಕರ ಕೋರೆ, ಮಹಾಂತೇಶ. ಕವಟಗಿಮಠ, ರೋಹಿಣಿ ಪಾಟೀಲ ಮಾತನಾಡಿ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಈಶಪ್ರಭು ಶಿಕ್ಷಣ ಸಂಸ್ಥೆಯು ಇನ್ನೂ ಹೆಚ್ಚಿನ ಪ್ರಗತಿ ಕಂಡು ನಾಡಿನ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯಲಿ ಎಂದು ಶುಭ ಕೋರಿದರು.
ಸಾಹಿತಿ ಡಾ.ವೈ.ಎಮ್.ಯಾಕೊಳ್ಳಿ ಉಪನ್ಯಾಸ ನೀಡಿದರು.
ಸಂಸ್ಥೆಯ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಈ ಸಂಸ್ಥೆ ವಿವಿಧ ಅಂಗ ಸಂಸ್ಥೆಗಳನ್ನು ಹೊಂದಿ ಇಂದು ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ದಾರಿದೀಪವಾಗಿರುವುದು ಸಾರ್ಥಕತೆ ಮೂಡಿಸಿದೆ ಎಂದರು.
ಹಿರೇಮಠದ ಶಿವಮಹಾಂತ ಶಿವಾಚಾರ್ಯ ಸ್ವಾಮಿಜಿ, ಮುರಗೋಡ ನೀಲಕಂಠ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ವರದಿ : ರವಿಕಿರಣ್ ಯಾತಗೇರಿ










