ಗ್ಯಾರಂಟಿ ಯೋಜನೆಗಳ ಸಮಾವೇಶ ಸಮಾರಂಭ : ಬೆಳಗಾವಿಯಲ್ಲಿ ದೂಳೆಬ್ಬಿಸಿದ ಕಾಂಗ್ರೆಸ್ ಪಡೆ
- krishna shinde
- 5 Feb 2024 , 2:06 PM
- Belagavi
- 559
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಯಿತು.

ಈ ಸಮಾವೇಶದಲ್ಲಿ ಗೃಹಜ್ಯೋತಿ ಯೋಜನೆ, ಯುವ ನಿಧಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ ಮತ್ತು ಶಕ್ತಿ ಯೋಜನೆ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ನಡೆಯಿತು.

ಸಮಾವೇಶದಲ್ಲಿ ಉಪಸ್ಥಿತರಿದ್ದ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, 8 ತಿಂಗಳ ಹಿಂದೆ ಕರ್ನಾಟಕ ಜನತೆಯ ಆರ್ಥಿಕ ಮುನ್ನಡೆಗೆ ಸಿದ್ದರಾಮಯ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು ಎಂದು ತಿಳಿಸಿದರು. ಈ ಯೋಜನೆಗಳ ಉಪಯೋಗಗಳನ್ನು ಜನರಿಗೆ ತಿಳಿಸಿ, ಅವುಗಳನ್ನು ಸರಿಯಾಗಿ ಸದುಪಯೋಗಗೊಳಿಸಿಕೊಳ್ಳಲು ಜನರನ್ನು ಒತ್ತಾಯಿಸಿದರು.
ಗ್ಯಾರಂಟಿ ಯೋಜನೆಗಳು :
ಗೃಹಜ್ಯೋತಿ ಯೋಜನೆ,ಯುವ ನಿಧಿ ಯೋಜನೆ,ಅನ್ನಭಾಗ್ಯ ಯೋಜನೆ
ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನಮಟ್ಟ ಸುಧಾರಿಸಲು ಸಹಾಯವಾಗಲಿದೆ ಎಂದು ಸಚಿವ ಜಾರಕಿಹೊಳಿ ಹೇಳಿದರು.










